ಯುದ್ಧನೌಕೆಗೆ ಮಹಿಳೆಯರ ನಿಯೋಜನೆ: ನೌಕಾಪಡೆಯಿಂದ ಐತಿಹಾಸಿಕ ಕ್ರಮ
ಭಾರತೀಯ ನೌಕಾಪಡೆಯ ಸಬ್ ಲೆಫ್ಟಿನೆಂಟ್ ಕುಮುದಿನಿ ತ್ಯಾಗಿ ಮತ್ತು ಸಬ್ ಲೆಫ್ಟಿನೆಂಟ್ ರಿತಿ ಸಿಂಗ್ ಯುದ್ಧನೌಕೆಯ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ. ನೌಕಾಪಡೆಯಲ್ಲಿ ಮಹಿಳಾ ಅಧಿಕಾರಿಗಳು ಹಲವು ವರ್ಷಗಳಿಂದ ಕರ್ತವ್ಯ ನಿರ್ವಹಿಸಿದ್ದರೂ, ಯುದ್ಧನೌಕೆಯಲ್ಲಿ ಕಾರ್ಯಾಚರಣೆ ಕರ್ತವ್ಯಕ್ಕೆ ಮಹಿಳೆಯರನ್ನು ನಿಯೋಜಿಸುತ್ತಿರುವುದು ಇದೇ ಮೊದಲು.
ಯುದ್ಧನೌಕೆಯಲ್ಲಿರುವ ಹಲವು ಸೆನ್ಸಾರ್‌ಗಳ ಬಳಕೆ ಬಗ್ಗೆ ಇವರಿಬ್ಬರೂ ತರಬೇತಿ ಪಡೆದುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ನೌಕಾಪಡೆಯ ಭಾಗವಾಗಲಿರುವ ಅತ್ಯಾಧುನಿಕ ಎಂಎಚ್-60 ಆರ್ ಹೆಲಿಕಾಪ್ಟರ್‌ಗಳನ್ನೂ ಈ ಮಹಿಳಾ ಅಧಿಕಾರಿಗಳು ನಿರ್ವಹಿಸಲಿದ್ದಾರೆ. ಕ್ಷಿಪಣಿ ಮತ್ತು ಟಾರ್ಪೆಡೊಗಳ ಮೂಲಕ ಶತ್ರುದೇಶದ ಯುದ್ಧನೌಕೆ, ಜಲಾಂತರ್ಗಾಮಿಗಳನ್ನೂ ನಾಶಪಡಿಸುವ ಸಾಮರ್ಥ್ಯ ಈ ಹೆಲಿಕಾಪ್ಟರ್‌ಗೆ ಇದೆ.
Team Edutube Kannada

No comments:
Post a Comment
If you have any doubts please let me know