ಪಿಡಿಎಫ್ ನೋಟ್ಸ್ ಹುಡುಕಲು ಇಲ್ಲಿ ಸರ್ಚ್ ಮಾಡಿ

Comments

ಹದಗೆಟ್ಟ ಆರ್ಥಿಕ ಪರಿಸ್ಥಿತಿ ನೇಮಕಾತಿ ಪ್ರಕ್ರಿಯೆಗೆ ತಡೆ ನೀಡಿದ KSRTC

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಆರ್ಥಿಕ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ತನ್ನ ಎಲ್ಲಾ ನೇಮಕಾತಿ ಪ್ರಕ್ರಿಯೆಗಳಿಗೆ ತಡೆ ನೀಡಿದೆ. ಆ ಕುರಿತಾದ ಹೆಚ್ಚಿನ ಮಾಹಿತಿ ಇಲ್ಲಿದೆ :


ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಆರ್ಥಿಕ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಸದ್ಯಕ್ಕೆ ಎಲ್ಲ ರೀತಿಯ ನೇಮಕಾತಿ ಪ್ರಕ್ರಿಯೆಗಳನ್ನು ತಡೆಹಿಡಿದಿದೆ. ಈ ಕುರಿತು ನಿಗಮದ ಅಧ್ಯಕ್ಷ ಎಂ.ಚಂದ್ರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರಂತೆ.

ಕೆಎಸ್‌ಆರ್‌ಟಿಸಿ ಆಂತರಿಕ ನಿಯತಕಾಲಿಕೆ 'ಸಾರಿಗೆ ಸಂಪದ' ಬಿಡುಗಡೆ ಮಾಡಿದ ನಂತರ, 17 ವಿಭಾಗೀಯ ನಿಯಂತ್ರಣಾಧಿಕಾರಿಗಳ ಜತೆ ವರ್ಚುವಲ್ ಸಭೆ ನಡೆಸಿದ ಅವರು, 'ನಿಗಮದ ಸ್ಥಿತಿ ಸುಧಾರಿಸಲು ಹಲವು ತಿಂಗಳುಗಳು ಅಥವಾ ವರ್ಷವೇ ಅವಶ್ಯಕವಾಗಿದೆ. ಅದನ್ನು ಗಮನದಲಿಟ್ಟುಕೊಂಡು, ಕೆಲವು ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ತಾತ್ಕಾಲಿಕ ತಡೆ ನೀಡುವ ಕಠಿಣ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ' ಎಂದಿದ್ದಾರೆ.

ಕೊರೊನಾ ಕಾರಣ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಅಲ್ಲದೇ ಕೊರೊನಾ ಆರಂಭಕ್ಕೂ ಮೊದಲು ಸಂಚರಿಸುತ್ತಿದ್ದ ಅರ್ಧದಷ್ಟು ನಿಗಮದ ಬಸ್ಸುಗಳು ಸಂಚಾರ ನಡೆಸುತ್ತಿಲ್ಲ. ಈ ಎಲ್ಲಾ ಕಾರಣಗಳಿಂದ ತಾತ್ಕಾಲಿಕವಾಗಿ ಈ ಕೆಳಗಿನ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗಳು ಸ್ಥಗಿತಗೊಳ್ಳಲಿವೆ.

* ಚಾಲಕ, ಚಾಲಕ ಕಂ ನಿರ್ವಾಹಕ ಸೇರಿ ಒಟ್ಟು 3745 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ತಾತ್ಕಾಲಿಕ ತಡೆಯಾಗಲಿದೆ. ಈ ಹುದ್ದೆಗಳಿಗೆ ಕಳೆದ ಫೆಬ್ರವರಿ ತಿಂಗಳಲ್ಲಿ ಅಧಿಸೂಚನೆ ಹೊರಡಿಸಿ, ಅರ್ಜಿ ಸ್ವೀಕರಿಸಲಾಗಿತ್ತು.

* ಕೆಎಸ್ಆರ್‌ಟಿಸಿಯ ಟೆಕ್ನಿಕಲ್ ಅಸಿಸ್ಟಂಟ್ ಮತ್ತು ಸೆಕ್ಯೂರಿಟಿ ಗಾರ್ಡ್‌ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ತಾತ್ಕಾಲಿಕ ತಡೆಯಾಗಲಿದೆ. ಈ ಹುದ್ದೆಗಳಿಗೆ ಈಗಾಗಲೇ ಲಿಖಿತ ಪರೀಕ್ಷೆ ನಡೆಸಿ, ಸರಿಯುತ್ತರಗಳನ್ನು ಪ್ರಕಟಿಸಲಾಗಿತ್ತು.

Team : EduTube Kannada

Post a Comment

0 Comments
* Please Don't Spam Here. All the Comments are Reviewed by Admin.

Buy Products

Important PDF Notes

Top Post Ad

Below Post Ad

Ads Area