February 26 ರಿಂದ 86 ನೇ ಕನ್ನಡ ಸಾಹಿತ್ಯ ಸಮ್ಮೇಳನ
ಕನ್ನಡ ಸಾಹಿತ್ಯ ಪರಿಷತ್ತು ಹಾವೇರಿಯಲ್ಲಿ 2021ರ ಫೆ.26ರಿಂದ ಫೆ.28ರವರೆಗೆ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ನಿರ್ಧರಿಸಿದೆ.
ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ನೇತೃತ್ವದಲ್ಲಿ ಮಂಗಳವಾರ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.
🌸 ಕನ್ನಡ ಸಾಹಿತ್ಯ ಸಮ್ಮೇಳನ
> ಸ್ಥಾಪನೆ :- 1915
> ಪ್ರಥಮ ಸಮ್ಮೇಳನ:-1915
> ಸ್ಥಳ :- ಬೆಂಗಳೂರು
> ಅಧ್ಯಕ್ಷತೆ:- ಎಚ್. ವಿ. ನಂಜುಂಡಯ್ಯ
> 2020 - ಕಲಬುರ್ಗಿ
> ಅಧ್ಯಕ್ಷತೆ :-ಡಾ. ಎಚ್.ಎಸ್. ವೆಂಕಟೇಶಮೂರ್ತಿ
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ.
ಧನ್ಯವಾದಗಳು :
ಟೀಮ್ ಎಜ್ಯೂಟ್ಯೂಬ್ ಕನ್ನಡ
No comments:
Post a Comment
If you have any doubts please let me know