ಪಿಡಿಎಫ್ ನೋಟ್ಸ್ ಹುಡುಕಲು ಇಲ್ಲಿ ಸರ್ಚ್ ಮಾಡಿ

Comments

Bidar Anganawadi Worker And Helper 238 Posts apply now

ಬೀದರ್ ನಲ್ಲಿವೆ 238 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳು : ಈಗಲೇ ಅರ್ಜಿ ಸಲ್ಲಿಸಿ...!!



ಉದ್ಯೋಗದ ಹುಡುಕಾಟದಲ್ಲಿರುವ ಮಹಿಳೆಯರಿಗೆ ಶುಭಸುದ್ದಿ...!!! ಬೀದರ್ ಜಿಲ್ಲಾ ವ್ಯಾಪ್ರಿಯಲ್ಲಿವೆ ಭರ್ಜರಿ 238 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳು. ಈಗಲೇ ಅರ್ಜಿ ಸಲ್ಲಿಸಿ ಮತ್ತು ಹೆಚ್ಚಿನ ಮಾಹಿತಿಗಾಗಿ ಮುಂದೆ ಓದಿ..!!!

🌼🌼🌼🌼🌼🌼🌼🌼🌼🌼🌼🌼🌼

ಕರ್ನಾಟಕ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ 2021ನೇ ನೇಮಕಾತಿ ಕುರಿತಂತೆ ಅಧಿಸೂಚನೆ ಹೊರಡಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಬೀದರ್ ಜಿಲ್ಲೆಯಲ್ಲಿ 238 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಂಗನವಾಡಿ ಕಾರ್ಯಕರ್ತ ಹಾಗೂ ಅಂಗನವಾಡಿ ಸಹಾಯಕ ಹುದ್ದೆಗಳಿಗೆ ಅರ್ಜಿ ಹಾಕಬಯಸುವವರು ಫೆಬ್ರವರಿ 06, 2021ರೊಳಗೆ ಅರ್ಜಿ ಸಲ್ಲಿಸಬಹುದು.

🌼🌼🌼🌼🌼🌼🌼🌼🌼🌼🌼🌼🌼

ಹುದ್ದೆಗಳ ವಿವರ ಹೀಗಿದೆ :

🌺 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ
🌺 ಒಟ್ಟು ಹುದ್ದೆಗಳು - 238

🌼🌼🌼🌼🌼🌼🌼🌼🌼🌼🌼🌼🌼

🌼🌼🌼🌼🌼🌼🌼🌼🌼🌼🌼🌼🌼

ನೆನಪಿರಲಿ :

ಸಹಾಯಕಿ ಹುದ್ದೆಗೆ ಅಂಗವಿಕಲರು ಅರ್ಹರಾಗಿರುವುದಿಲ್ಲ.
ಅಭ್ಯರ್ಥಿಗಳು ಜನನ ಪ್ರಮಾಣ ಪತ್ರ, ವಿದ್ಯಾರ್ಹತೆ ಪ್ರಮಾಣ ಪತ್ರ, ವಾಸಸ್ಥಳ ದೃಢೀಕರಣ ಪತ್ರ (ತಹಸೀಲ್ದಾರ್ ಕಚೇರಿಯಿಂದ ಪಡೆದದ್ದು), ಜಾತಿ ಪ್ರಮಾಣಪತ್ರವನ್ನು ಸಲ್ಲಿಸಬೇಕು.

ಈ ಮೀಸಲಾತಿಗಳೂ ಅನ್ವಯಿಸುತ್ತವೆ :

ಅಭ್ಯರ್ಥಿಗಳು ವಿಧವೆ, ವಿಚ್ಛೇದಿತೆ, ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಯಿಂದ ಪಡೆದ ಪ್ರಮಾಣ ಪತ್ರ ಸಲ್ಲಿಸಬೇಕು. ದೇವದಾಸಿಯರ ಮಕ್ಕಳು, ಅಂಗವಿಕಲರಾಗಿದ್ದಲ್ಲಿ ಸರ್ಕಾರದಿಂದ ದೃಢೀಕರಿಸಿದ ಪ್ರಮಾಣಪತ್ರ, ಪರಿತ್ಯಕ್ತೆ ಎಂದು ಗ್ರಾಪಂನಿಂದ ನೀಡಿದ ಪತ್ರ, ಯೋಜನಾ ನಿರಾಶ್ರಿತರಾಗಿದ್ದಲ್ಲಿ ತಹಸೀಲ್ದಾರ್ ಅವರಿಂದ ಪಡೆದ ಪತ್ರಗಳನ್ನು ಅರ್ಜಿಯೊಂದಿಗೆ ಸಲ್ಲಿಸಬಹುದು. ಈ ಪ್ರಮಾಣಪತ್ರಗಳನ್ನು ಆಯಾ ಮೀಸಲಾತಿಗೆ ಪರಿಗಣಿಸಲಾಗುತ್ತದೆ.

🌼🌼🌼🌼🌼🌼🌼🌼🌼🌼🌼🌼🌼

ವಿದ್ಯಾರ್ಹತೆ ಏನಿರಬೇಕು :

🍀 ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಎಸ್ಸೆಸ್ಸೆಲ್ಸಿ,
🍀 ಸಹಾಯಕಿಯರ ಹುದ್ದೆಗೆ ಕನಿಷ್ಠ 4ನೇ ತರಗತಿ, ಗರಿಷ್ಠ 9ನೇ ತರಗತಿ. ಕನ್ನಡ ಭಾಷೆ ಜ್ಞಾನ ಅವಶ್ಯ.

ವಯೋಮಿತಿ ಎಷ್ಟಿರಬೇಕು :

18 ರಿಂದ 35 ವರ್ಷ. ಅಂಗವಿಕಲರಿಗೆ 10 ವರ್ಷ ವಯೋಸಡಿಲಿಕೆ ಇದೆ.


🌼🌼🌼🌼🌼🌼🌼🌼🌼🌼🌼🌼🌼


ಆಯ್ಕೆ ಪ್ರಕ್ರಿಯೆ ಹೇಗಿರುತ್ತೆ:

ವಿದ್ಯಾರ್ಹತೆ, ವಯೋಮಿತಿ, ಆಸಿಡ್ ದಾಳಿಗೆ ತುತ್ತಾದವರು, ಇಲಾಖೆಯ ಸಂಸ್ಥೆಗಳಲ್ಲಿ ಹಾಗೂ ರಾಜ್ಯ ಮಹಿಳಾ ನಿಲಯಗಳಲ್ಲಿ ಆಶ್ರಯ ಪಡೆದವರಿಗೆ, ವಿಧವೆಯರಿಗೆ, ಸ್ಥಳೀಯರಿಗೆ ಆದ್ಯತೆ ನೀಡಿ ಆಯ್ಕೆ ಮಾಡಲಾಗುವುದು.


🌼🌼🌼🌼🌼🌼🌼🌼🌼🌼🌼🌼🌼


ಇವುಗಳು ಗೌರವಧನ ಆಧಾರಿತ ಹುದ್ದೆ :

ಈ ನೇಮಕಾತಿಗಳು ಗೌರವಧನ ಆಧಾರಿತವಾಗಿವೆ. 

🏵 ಅಂಗನವಾಡಿ ಕಾರ್ಯಕರ್ತೆಗೆ ಮಾಸಿಕ 10,000ರೂ,
🏵 ಮಿನಿ ಅಂಗನವಾಡಿ ಕಾರ್ಯಕರ್ತೆಗೆ 5,750 ರೂ.,
🏵 ಸಹಾಯಕಿಯರಿಗೆ 5,000 ರೂ. ವೇತನ ನಿಗದಿಯಾಗಿದೆ.

🌼🌼🌼🌼🌼🌼🌼🌼🌼🌼🌼🌼🌼

ಪ್ರಮುಖ ದಿನಾಂಕಗಳು : 

🌸 ಅರ್ಜಿ ಸಲ್ಲಿಸಲು ಕೊನೇ ದಿನ: 06 ಫೆಬ್ರವರಿ 2021




ಮಾಹಿತಿಗೆ: https://anganwadirecruit.kar.nic.in


 🔮🔮🔮🔮🔮🔮🔮🔮🔮🔮🔮🔮🔮🔮🔮🔮🔮


















(FDA SDA ಹಳೆಯ ಪ್ರಶ್ನೆ ಪತ್ರಿಕೆಯ ಪಿಡಿಎಫ್ ಫೈಲ್‍ನ್ನು ಈಗಾಗೇ ಅಪ್‍ಲೋಡ್ ಮಾಡಲಾಗಿದೆ. ಹಳೆಯ ಪೋಸ್ಟ್‌ ಗಳನ್ನು ನೋಡಲು Home Page Button ಮೇಲೆ ಕ್ಲಿಕ್ ಮಾಡಿ. ಇನ್ನೂ ಹೆಚ್ಚಿನ ಪಿಡಿಎಫ್ ನೋಟ್ಸ್ ಗಳಿಗಾಗಿ ನಮ್ಮ ವೆಬ್‍ಸೈಟ್ ಗೆ ನಿರಂತರವಾಗಿ ಭೇಟಿ ನೀಡಿ. . . . . . . . .



ಸ್ನೇಹಿತರೇ ನಮ್ಮ ಈ ಪ್ರಯತ್ನ ನಿಮಗೆ ಇಷ್ಟವಾಗಿದ್ದರೆ


💥  ನಮ್ಮ ಎಲ್ಲಾ Social Media links 💥

 ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರ ಮಾಹಿತಿ, ಉದ್ಯೋಗ ಮಾಹಿತಿ ಹಾಗೂ ಪಿಡಿಎಫ್ ನೋಟ್ಸ್ ಇನ್ನಿತರೇ ಮಹತ್ವದ ವಿಷಯಗಳನ್ನು ತಿಳಿಯಲು ನಮ್ಮ ಈ ಕೆಳಗಿನ ಸಾಮಾಜಿಕ ಜಾಲತಾಣ ಮಾಧ್ಯಮಗಳೊಂದಿಗೆ ನಿರಂತರ ಸಂಪರ್ಕದಲ್ಲಿರಿ...





















ಧನ್ಯವಾದಗಳು :

ಟೀಮ್ ಎಜ್ಯೂಟ್ಯೂಬ್ ಕನ್ನಡ







Post a Comment

0 Comments
* Please Don't Spam Here. All the Comments are Reviewed by Admin.

Buy Products

Important PDF Notes

Top Post Ad

Below Post Ad

Ads Area