KPSC 24-01-2021 FDA Exam Postponed
ದಿನಾಂಕ 24-01-2021 ರಂದು ನಡೆಯಬೇಕಿದ್ದ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2019ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ದಿನಾಂಕ 23-01-2021 ರಂದು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯನ್ನು ಮತ್ತು ದಿನಾಂಕ 24-01-2021 ರಂದು ಎರಡು ಅಧಿವೇಶನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಲಾಗಿತ್ತು.
ದಿನಾಂಕ 23-01-2021 ರಂದು ಬಲ್ಲಮೂಲಗಳಿಂದ ಸ್ವೀಕೃತ ಗೊಂಡ ಮಾಹಿತಿಯ ಪ್ರಕಾರ ದಿನಾಂಕ 24-01-2021 ರಂದು ಎರಡು ಅಧಿವೇಶನಗಳಲ್ಲಿ ನಡೆಯಬೇಕಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಕೆಲವೊಂದು ದುಷ್ಕರ್ಮಿಗಳ ಕೈ ಸೇರಿರುವುದು ತಿಳಿದು ಬಂದಿರುವ ಹಿನ್ನೆಲೆಯಲ್ಲಿ, ದಿನಾಂಕ 24-01-2021 ರಂದು ನಡೆಯಬೇಕಾಗಿದ್ದ 2019ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ.
ಮುಂದುವರೆದ ಸ್ಪರ್ಧಾತ್ಮಕ ಪರೀಕ್ಷೆಗಳ ದಿನಾಂಕವನ್ನು ಮರುನಿಗದಿಪಡಿಸಿ ಪ್ರಕಟಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
If you have any doubts please let me know