ಪಿಡಿಎಫ್ ನೋಟ್ಸ್ ಹುಡುಕಲು ಇಲ್ಲಿ ಸರ್ಚ್ ಮಾಡಿ

Comments

KARTET 2021 ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ : ಈಗಲೇ ಅರ್ಜಿ ಸಲ್ಲಿಸಿ Karnataka Teacher Eligibility Test 2021: Apply Online Now

KARTET 2021 ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ : ಈಗಲೇ ಅರ್ಜಿ ಸಲ್ಲಿಸಿ


KARTET 2021 ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ : ಈಗಲೇ ಅರ್ಜಿ ಸಲ್ಲಿಸಿ Karnataka Teacher Eligibility Test 2021: Apply Online Now



ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ 2021 Karnataka Teachers Eligibility Test 2021 ಗೆ ಅರ್ಜಿ ಆಹ್ವಾನ


ಸ್ನೇಹಿತರೆ, ಆರ್ಟಿಇ ಕಾಯ್ದೆ ಎರಡನೇ ವಿಭಾಗದಲ್ಲಿ ಷರತ್ತು (ಎನ್) ನಲ್ಲಿ ಉಲ್ಲೇಖಿಸಲ್ಪಟ್ಟಿರುವಂತೆ, ಯಾವುದೇ ಶಾಲೆಗಳಲ್ಲಿ ಶಿಕ್ಷಕರಾಗಿ ನೇಮಕಾತಿಗೆ ಅರ್ಹತೆ ಪಡೆಯಲು ಎಂಸಿಟಿ ವತಿಯಿಂದ ರೂಪಿಸಲಾದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಸೂಕ್ತ ಸರಕಾರದ ಮೂಲಕ ನಡೆಸಲಾಗುವ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಅಂದರೆ ಟಿಇಟಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.


ಕರ್ನಾಟಕ ಸರ್ಕಾರವು ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು (KARTET) ನಡೆಸುವ ಜವಾಬ್ದಾರಿಯನ್ನು ಕೇಂದ್ರೀಕೃತ ದಾಖಲಾತಿ ಘಟಕ (CAC) (Centralised Admission Cell) ಆಯುಕ್ತರ ಕಛೇರಿ ಸಾರ್ವಜನಿಕ ಶಿಕ್ಷಣ ಇಲಾಖೆ ಬೆಂಗಳೂರು ಇವರಿಗೆ ವಹಿಸಿದೆ.


ಆಯ್ತಾ 2021ರ ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಮತ್ತು ಆಸಕ್ತ ಅಭ್ಯರ್ಥಿಗಳು ಶಿಕ್ಷಕರ ಅರ್ಹತಾ ಪರೀಕ್ಷೆಗೆ ಸಂಬಂಧಪಟ್ಟಂತೆ ಅರ್ಜಿ ಸಲ್ಲಿಸಲು ಇಲಾಖೆಯ ವೆಬ್ ಸೈಟ್ www.schooleducation.kar.nic.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.


ಅಭ್ಯರ್ಥಿಗಳಿಗೆ ಸೂಚನೆಗಳು

1) ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ 2021ಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ದಿನಾಂಕ:01-07-2021 ರಿಂದ 20-07-2021 ರ ಒಳಗಾಗಿ ಅರ್ಜಿ ಸಲ್ಲಿಸಬೇಕು.

2) ಅಭ್ಯರ್ಥಿಗಳು ಆನ್ಲೈನ್ ಅರ್ಜಿಯನ್ನು ಪೂರ್ಣ ವಿವರಗಳೊಂದಿಗೆ ಭರ್ತಿಮಾಡಿ ಸ್ಕ್ಯಾನ್ ಮಾಡಲಾದ ತಮ್ಮ ಭಾವಚಿತ್ರ ಹಾಗೂ ಸಹಿಯನ್ನು JPEG Format ನಲ್ಲಿ ಅಪ್‌ಲೋಡ್ ಮಾಡುವುದು.

3) ಆನ್‌ಲೈನ್ ಅರ್ಜಿಯಲ್ಲಿ ಅಗತ್ಯವಿರುವ ಎಲ್ಲ ಮಾಹಿತಿಗಳನ್ನು ಪೂರ್ಣವಾಗಿ ಭರ್ತಿ ಮಾಡಿದ ನಂತರ ಅಭ್ಯರ್ಥಿಗಳು ತಮ್ಮ ನೊಂದಣಿ ಸಂಖ್ಯೆ ಹಾಗೂ ಪೂರ್ಣ ವಿವರಗಳನ್ನೊಳಗೊಂಡ ಅರ್ಜಿಯ ಕಂಪ್ಯೂಟರ್ ಜನರೇಟೆಡ್ ಪ್ರತಿಯ ಪ್ರಿಂಟ್ ಔಟ್ ನ್ನು ತೆಗೆದುಕೊಳ್ಳುವುದು.


ಪರೀಕ್ಷಾ ಶುಲ್ಕ:



ಆನ್ಲೈನ್ ಅರ್ಜಿ ಸಲ್ಲಿಸುವ ದಿನಾಂಕ 01-07-2021 ರಿಂದ 20-07-2021
ಶುಲ್ಕ ಪಾವತಿಸಲು ಕೊನೆಯ ದಿನಾಂಕ 20-07-2021
ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳುವ ಅವಧಿ ದಿನಾಂಕ 12-07-2021 ರಿಂದ ಪರೀಕ್ಷಾ ದಿನಾಂಕದವರೆಗೆ
ಪರೀಕ್ಷಾ ದಿನಾಂಕ 22-08-2021
ಪರೀಕ್ಷಾ ಕೇಂದ್ರ ಪ್ರವೇಶ ಪತ್ರದಲ್ಲಿ ಸೂಚಿಸಿರುವಂತೆ
ಪರೀಕ್ಷೆಯ ದಿನಾಂಕದಂದು ತರಬೇಕಾದ ವಸ್ತುಗಳು ಪ್ರವೇಶ ಪತ್ರ ಮತ್ತು ಒಳ್ಳೆಯ ಗುಣಮಟ್ಟದ ನೀಲಿ ಅಥವಾ ಕಪ್ಪು ಬಾಲ್ ಪಾಯಿಂಟ್ ಪೆನ್ನು


Post a Comment

0 Comments
* Please Don't Spam Here. All the Comments are Reviewed by Admin.

Buy Products

Important PDF Notes

Popular Posts

Top Post Ad

Below Post Ad

Ads Area