ಪಿಡಿಎಫ್ ನೋಟ್ಸ್ ಹುಡುಕಲು ಇಲ್ಲಿ ಸರ್ಚ್ ಮಾಡಿ

Comments

ಜಗಜ್ಯೋತಿ ಬಸವೇಶ್ವರರು : ಪರಿಚಯ ಹಾಗೂ ಬಸವಣ್ಣನವರ 100 ವಚನಗಳ ಸಂಗ್ರಹ

ಜಗಜ್ಯೋತಿ ಬಸವೇಶ್ವರರು : ಪರಿಚಯ ಹಾಗೂ ಬಸವಣ್ಣನವರ 100 ವಚನಗಳ ಸಂಗ್ರಹ 

ಜಗಜ್ಯೋತಿ ಬಸವೇಶ್ವರರು : ಪರಿಚಯ ಹಾಗೂ ಬಸವಣ್ಣನವರ 100 ವಚನಗಳ ಸಂಗ್ರಹ  Jagajyoti Basavannanavar 100+ Vachanagalu in Kannada


Hello Friends, In this article we provide the top 100+ Basaveshwara Vachana's. This Basavanna Vachanagalu helps your daily life.


ಜಗಜ್ಯೋತಿ ಬಸವೇಶ್ವರರು : ಪರಿಚಯ



‘ಭಕ್ತಿ ಭಂಡಾರಿ‘ ಎಂದು ಖ್ಯಾತರಾಗಿರುವ ಬಸವಣ್ಣನವರು ೧೨ ನೇ ಶತಮಾನದ ಧಾರ್ಮಿಕ , ಸಾಂಸ್ಕೃತಿಕ ಮತ್ತು ಸಾಮಾಜಿಕ ಕ್ರಾಂತಿಯ ಕೇಂದ್ರ ಪುರುಷ , ಬಿಜಾಪುರ ಜಿಲ್ಲೆಯ ಬಾಗೇವಾಡಿಯಲ್ಲಿ ಮಾಮಾದರಸ ಮತ್ತು  ಮಾದಲಾಂಬಿಕೆ ದಂಪತಿಗಳ ಮಗನಾಗಿ ಜನಿಸಿದರು . ಬಿಜ್ಜಳನ ಆಸ್ಥಾನದಲ್ಲಿ ಕೋಶಾಧಿಕಾರಿಯಾಗಿದ್ದರು . ಭಕ್ತಿ ,ಜ್ಞಾನ , ಮಾನವೀಯತೆ ಹಾಗೂ ವೈರಾಗ್ಯ ಪರವಾದ ಬಸವಣ್ಣನವರ ವಚನಗಳು ಸುಲಭವಾದ , ಲಲಿತವಾದ , ಸರಳ ಭಾಷೆಯಿಂದ ಕೂಡಿವೆ . ಬಸವಣ್ಣನವರ ಮುಖ್ಯ ಕಾಳಜಿ ಸಮಾಜಸುಧಾರಣೆಯಾಗಿತ್ತು . ಜಾತಿ–ಕುಲ–ಲಿಂಗ ಭೇದಗಳಿಂದ ಹೊರತಾದ ಸಮಾಜ ನಿರ್ಮಿತಿ ಅವರ ಪ್ರಮುಖ ಗುರಿಯಾಗಿದ್ದಿತು . ಜನರ ಅಜ್ಞಾನ , ಕಂದಾಚಾರ , ಜಾತಿ ಸಂಕರಗಳನ್ನು ಕುರಿತು ಅವರ ವಚನಗಳು ಚಿಂತಿಸಿವೆ . ಉಪದೇಶ , ವಿಡಂಬನೆ ಮುಂತಾದ ಗುಣಗಳನ್ನು ಅಲ್ಲಿ ಕಾಣಬಹುದು . ಬಸವಣ್ಣ ಕಾಯಕದ ಮಹತ್ವವನ್ನು ಜಗತ್ತಿಗೆ ಸಾರಿದ ಮಹಾಪುರುಷ , ಮಹಾಮನೆಯಲ್ಲಿ ವಿವಿಧ ವರ್ಗದ ವಚನಕಾರರು ಒಂದೆಡೆ ಕಲೆಯುವಂತೆ ಮಾಡಿದ ಬಸವಣ್ಣನವರ ಸಂಘಟನಾ ಶಕ್ತಿಯ ಜೊತೆ ಜೊತೆಗೆ ಯುಗಪರಿವರ್ತನೆಗೆ ಶ್ರಮಿಸಿದ ಸಂಕಲ್ಪಬಲವೂ ಅತ್ಯಂತ ಗಮನಾರ್ಹ ವಾದುದು . ಅವರ ವಚನಗಳಲ್ಲಿ ಸಾರ್ವಕಾಲಿಕ ಗುಣವಿದೆ .

ಬಸವಣ್ಣನವರ ವಚನಗಳ  ಆಶಯ 


ಬಸವಣ್ಣನವರ ವಚನಗಳು ಬದುಕಿನ ದಿಕ್ಕನ್ನೇ ಬದಲಿಸಬಲ್ಲ ಸಾಮಥ್ರ್ಯವಿರುವ ಶ್ರೇಷ್ಠ ಜೀವನೋಕ್ತಿಗಳು. ಬಸವಣ್ಣನವರ ಪ್ರತಿಯೊಂದು ವಚನಗಳೂ ಸಹಿತ ಜೀವನದ ಒಂದಿಲ್ಲೊಂದು ಮೌಲ್ಯಗಳನ್ನು ತಿಳಿಸುತ್ತವೆ. ಆದ್ದರಿಂದ ಇವತ್ತಿನ ಈ ಲೇಖನದಲ್ಲಿ ನಾವು ಬಸವಣ್ಣನವರ 100ಕ್ಕೂ ಅಧಿಕ ವಚನಗಳ ಸಂಗ್ರಹವನ್ನು ನೀಡುತ್ತಿದ್ದಿವೆ. ಈ ವಚನಗಳನ್ನು ಹಲವಾರು ಪುಸ್ತಕಗಳೂ ಸೇರಿದಂತೆ ಹಲವಾರು ಮೂಲಗಳಿಂದ ಸಂಗ್ರಹಿಸಿ ಇಲ್ಲಿ ಪ್ರಕಟಿಸಿದ್ದೇವೆ. ಈ ಅಮೂಲ್ಯ ವಚನಗಳ ಸಂಗ್ರಹದಲ್ಲಿ ನೆರವಾದ ಎಲ್ಲ ಮೂಲ ಮಾಹಿತಿ ಹಾಗೂ ಸಂಗ್ರಹಕಾರರಿಗೆ ಅಮೂಲ್ಯವಾದ ವಂದನೆಗಳು. ಬಸವಣ್ಣನವರ ವಚನಗಳು ಪ್ರತಿನಿತ್ಯವೂ ನಿತ್ಯ ರೂಢಿಯಲ್ಲಿ ಬಳಸುವಂತಾಗಬೇಕು. ಈ ಮೂಲಕ ನಮ್ಮ ಜೀವನವನ್ನು ಪುನೀತವನ್ನಾಗಿಸಿಕೊಳ್ಳೋಣ. ಈ ಬಸವಣ್ಣನವರ 100ಕ್ಕೂ ಅಧಿಕ ವಚನಗಳನ್ನು ಕೇವಲ ಓದುವುದು ಮಾತ್ರವಾಗದೇ ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಅದೇ ರೀತಿ ನಡೆಯುವಂತಾಗಬೇಕು. ಅಂದಾಗ ಮಾತ್ರ ಬಸವಣ್ಣನವರ ಈ ವಚನಗಳ ಮೌಲ್ಯವು ಹೆಚ್ಚುವುದು.


ಬಸವಣ್ಣನವರ ವಚನಗಳು ಮನುಷ್ಯನ ವ್ಯಕ್ತಿತ್ವ ವಿಕಸನಕ್ಕೆ ಪ್ರಾಮುಖ್ಯತೆಯನ್ನು ನೀಡಿವೆ. ಮನುಷ್ಯರ ನಡುವಿನಲ್ಲಿ ಹೊಮ್ಮಬೇಕಾದ ಮಾನವೀಯತೆ , ಹೃದಯ ವೈಶಾಲ್ಯತೆಯು ಗೈರು ಹಾಜರಾದಾಗ ನಮ್ಮ ಭಕ್ತಿಗೆ ಅರ್ಥವಿರುವುದಿಲ್ಲ . ಭಕ್ತನು ಶಿವಲಿಂಗದೊಂದಿಗೆ ಹೊಂದಬೇಕಾದ ಸಾಮರಸ್ಯವೂ ಈ ಬಗೆಯದೇ ಆಗಿದೆ .

ಮೂಲದಲ್ಲಿ ಸತ್ವವಿರದ ತೋರಿಕೆಯ ಭಕ್ತಿಯು ಮಂಗನ ಕೈಯೊಳಗಣ ಮಾಣಿಕ್ಯದಂತೆ , ಬೆಲೆ ತಿಳಿಯದೆ ಹೋದೀತು . ನಮ್ಮನ್ನು ಕಾಯಬೇಕಾದವರು ಕೊಲ್ಲಲು ಸಂಚುಹೂಡಿದಾಗ, ಇನ್ಯಾರೂ ಕಾಯಲಾರ ರೆಂಬ ಸಂಗತಿಗಳನ್ನು ಇಲ್ಲಿನ ವಚನಗಳು ವಿವರಿಸಿವೆ. ಶಿವಪಥವನ್ನು ಅರಿಯುವ ಸಂಕಲ್ಪಬಲ ನಿಜಭಕ್ತನ ಮೂಲ ಗುಣವಾಗಬೇಕು ಎಂಬುದನ್ನು ಪ್ರತಿಪಾದಿಸುವಲ್ಲಿಯೂ ಎದ್ದು ಕಾಣುವ ಕಾವ್ಯಾತ್ಮಕ ಗುಣ ಬಸವಣ್ಣನವರ ಕವಿ ಹೃದಯವನ್ನು ಬಿಂಬಿಸಿದೆ. ಅಸ್ವಸ್ಥ ವ್ಯಕ್ತಿ ಮತ್ತು ಅಸ್ವಸ್ಥ ಸಮಾಜದ ಲಕ್ಷಣಗಳೆಂದರೆ ಆತ್ಮನಿಂದೆ ಆತ್ಮಸ್ತುತಿ ಆತ್ಮಹತ್ಯೆ – ಆತ್ಮರತಿ ಮುಂತಾದುವು, ಆತ್ಮವಿಮರ್ಶೆಯು ಆರೋಗ್ಯವಂತ ವ್ಯಕ್ತಿ ಮತ್ತು ಆರೋಗ್ಯವಂತ ಸಮಾಜಗಳ ಪ್ರತೀಕ. ಬಸವಣ್ಣನವರ ವಚನಗಳಲ್ಲಿರುವಷ್ಟು ಆತ್ಮವಿಮರ್ಶೆಯನ್ನು ಮತ್ತೊಬ್ಬ ವಚನಕಾರರಲ್ಲಿ ಕಾಣಲಾರೆವು , ಆತ್ಮವಿಮರ್ಶೆಯು ವ್ಯಕ್ತಿತ್ವದ ವರ್ಧಮಾನಕ್ಕೆ ಪ್ರೇರಕವಾಗುವ ಚೈತನ್ಯಶಕ್ತಿ.



ಜಗಜ್ಯೋತಿ ಬಸವೇಶ್ವರರು : ಪರಿಚಯ ಹಾಗೂ ಬಸವಣ್ಣನವರ 100 ವಚನಗಳ ಸಂಗ್ರಹ (Collection of The Top-100+ Basavanna Vachana in Kannada)

1) ಇವನಾರವ, ಇವನಾರವ, ಇವನಾರವನೆಂದೆನಿಸದಿರಯ್ಯಾ.
ಇವ ನಮ್ಮವ, ಇವ ನಮ್ಮವ, ಇವ ನಮ್ಮವನೆಂದೆನಿಸಯ್ಯಾ.
ಕೂಡಲಸಂಗಮದೇವಾ ನಿಮ್ಮ ಮನೆಯ ಮಗನೆಂದೆನಿಸಯ್ಯಾ.

2) ನರವಿಂಧ್ಯದೊಳಗೆನ್ನ ಹುಲುಗಿಳಿಯ ಮಾಡಿ
ಸಲಹುತ್ತ, ‘ಶಿವಶಿವಾ’ ಎಂದೋದಿಸಯ್ಯ.
ಭಕ್ತಿ ಎಂಬ ಪಂಜರದೊಳಗಿಕ್ಕಿ ಸಲಹು ಕೂಡಲಸಂಗಮದೇವ.


3) ಕರಿಯಂಜುವುದು ಅಂಕುಶಕ್ಕಯ್ಯ.
ಗಿರಿಯಂಜುವುದು ಕುಲಿಶಕ್ಕಯ್ಯ.
ತಮಂಧವಂಜುವುದು ಜ್ಯೋತಿಗಯ್ಯ.
ಕಾನನವಂಜುವುದು ಬೇಗೆಗಯ್ಯ.
ಪಂಚಮಹಾಪಾತಕವಂಜುವುದು
ನಮ್ಮ ಕೂಡಲಸಂಗನ ನಾಮಕ್ಕಯ್ಯ.


4) ನೀರಿಂಗೆ ನೈದಿಲೇ ಶೃಂಗಾರ,
ಊರಿಂಗೆ ಆರವೆಯೇ ಶೃಂಗಾರ,
ಸಮುದ್ರಕ್ಕೆ ತೆರೆಯೇ ಶೃಂಗಾರ
ನಾರಿಗೆ ಗುಣವೇ ಶೃಂಗಾರ
ಗಗನಕ್ಕೆ ಚಂದ್ರಮನೇ ಶೃಂಗಾರ
ನಮ್ಮ ಕೂಡಲಸಂಗನ ಶರಣರಿಗೆ ನೊಸಲ ವಿಭೂತಿಯೇ ಶೃಂಗಾರ.


5) ನೀನೊಲಿದರೆ ಕೊರಡು ಕೊನರುವುದಯ್ಯ.
ನೀನೊಲಿದರೆ ಬರಡು ಹಯನಹುದಯ್ಯ.
ನೀನೊಲಿದರೆ ವಿಷವಮೃತವಹುದಯ್ಯ.
ನೀನೊಲಿದರೆ ಸಕಲ ಪಡಿಪದಾರ್ಥ ಇದಿರಲಿಪ್ಪವು
ಕೂಡಲಸಂಗಮದೇವ.



6) ಭಕ್ತಿ ಇಲ್ಲದ ಬಡವ ನಾನಯ್ಯಾ 
ಕಕ್ಕಯ್ಯನ ಮನೆಯಲ್ಲೂ ಬೇಡಿದೆ,
ಚೆನ್ನಯ್ಯನ ಮನೆಯಲ್ಲೂ ಬೇಡಿದೆ
ದಾಸಯ್ಯನ ಮನೆಯಲ್ಲೂ ಬೇಡಿದೆ
ಎಲ್ಲ‌ ಪುರಾತನರು ನೆರೆದು ಭಕ್ತಿ ಬಿಕ್ಷವನಿಕ್ಕಿದಡೆ ಎನ್ನ ಪಾತ್ರೆ ತುಂಬಿತ್ತು ಕೂಡಲಸಂಗಮದೇವ.



7) ಮಡಕೆಯ ಮಾಡುವಡೆ ಮಣ್ಣೆ ಮೊದಲು
ತೊಡಿಕೆಯ ಮಾಡುವಡೆ ಹೊನ್ನೇ ಮೊದಲು
ಶಿವಪಥವನರಿವಡೆ ಗುರುಪಥವೇ ಮೊದಲು 
ಕೂಡಲಸಂಗಮದೇವನರಿವಡೆ ಶರಣರ ಸಂಗವೇ ಮೊದಲು...‌



8) ನೀರಿಂಗೆ ನೈದಿಲೇ ಶೃಂಗಾರ 
ಊರಿಂಗೆ ಆರವೆಯೇ ಶೃಂಗಾರ 
ನಾರಿಗೆ ಗುಣವೇ ಶೃಂಗಾರ 
ಗಗನಕ್ಕೆ ಚಂದ್ರಮನೇ ಶೃಂಗಾರ 
ನಮ್ಮ ಕೂಡಲಸಂಗನ ಶರಣಗೆ ನೊಸಲ ಶ್ರೀ ವಿಭೂತಿಯೇ ಶೃಂಗಾರ.



9) ಹುತ್ತವ ಬಡಿದರೆ ಉರಗ ಸಾವುದೆ?
ಘೋರತಪವ ಮಾಡಿದರೇನು 
ಅಂತರಂಗ ಆತ್ಮಶುದ್ಧಿಯಿಲ್ಲದವರನೆಂತು ನಂಬುವನಯ್ಯಾ ಕೂಡಲಸಂಗಮದೇವ?



10) ಜನಿತಕ್ಕೆ ತಾಯಾಗಿ ಹೆತ್ತಳು ಮಾಯೆ
ಮೋಹಕ್ಕೆ ಮಗಳಾಗಿ ಹುಟ್ಟಿದಳು ಮಾಯೆ
ಕೂಟಕ್ಕೆ ಸ್ರ್ತೀಯಾಗಿ ಕೂಡಿದಳು ಮಾಯೆ
ಇದಾವ ಪರಿಯಲ್ಲಿ ಕಾಡಿತ್ತು ಮಾಯೆ.
ಈ ಮಾಯೆಯ ಕಳೆವಡೆ ಎನ್ನಳವಲ್ಲ ನೀವೇ ಬಲ್ಲಿರಿ ಕೂಡಲಸಂಗಮದೇವ.

ಜಗಜ್ಯೋತಿ ಬಸವೇಶ್ವರರು : ಪರಿಚಯ ಹಾಗೂ ಬಸವಣ್ಣನವರ 100 ವಚನಗಳ ಸಂಗ್ರಹ (Collection of The Top-100+ Basavanna Vachana in Kannada)


11) ಒಲೆ ಹೊತ್ತಿ ಉರಿದರೆ ನಿಲಬಹುದಲ್ಲದೆ ಧರೆ ಹೊತ್ತಿ ಉರಿದರೆ ನಿಲಬಹುದೆ?
ಏರಿ ನೀರುಂಬಡೆ, ಬೇಲಿ ಹೊಲವ ಮೇವೊಡೆ, 
ನಾರಿ ತನ್ನ ಮನೆಯಲ್ಲಿ ಕಳುವೊಡೆ, 
ತಾಯ ಮೊಲೆವಾಲು ನಂಜಾಗಿ ಕೊಲುವೊಡೆ 
ಇನ್ನಾರಿಗೆ ದೂರವೆನಯ್ಯಾ ಕೂಡಲಸಂಗಮದೇವ?


12) ಬೆಳೆವ ಭೂಮಿಯಲೊಂದು ಪ್ರಳಯದ ಕಸ ಹುಟ್ಟಿ 
ತಿಳಿಯಲೀಯದು ಎಚ್ಚರಲೀಯದು.
ಎನ್ನವಗುಣವೆಂಬ ಕಸವ ಕಿತ್ತು ಸಲಹಯ್ಯಾ ಲಿಂಗ ತಂದೆ, 
ಸುಳಿದೆಗೆದು ಬೆಳೆವೆನು ಕೂಡಲಸಂಗಮದೇವ...‌



13) ಮನೆಯೊಳಗೆ ಮನೆಯೊಡೆಯನಿದ್ದಾನೊ ಇಲ್ಲವೋ,
ಹೊಸ್ತಿಲಲ್ಲಿ ಹುಲ್ಲು ಹುಟ್ಟಿ, ಮನೆಯೊಳಗೆ ರಜ ತುಂಬಿ. 
ಮನೆಯೊಳಗೆ ಮನೆಯೊಡೆಯನಿದ್ದಾನೊ ಇಲ್ಲವೋ,
ತನುವಿನೊಳಗೆ ಹುಸಿ ತುಂಬಿ, ಮನದೊಳಗೆ ವಿಷಯ ತುಂಬಿ. 
ಮನೆಯೊಳಗೆ ಮನೆಯೊಡೆಯನಿಲ್ಲ ಕೂಡಲಸಂಗಮದೇವ.



14) ಗಂಡನ ಮೇಲೆ‌ ಸ್ನೇಹವಿಲ್ಲದ ಹೆಂಡತಿ,
ಲಿಂಗದ ಮೇಲೆ ನಿಷ್ಟೆಯಿಲ್ಲದ‌ ಭಕ್ತ 
‌ಇದ್ದಡೇನೋ, ಶಿವ ಶಿವಾ ಹೋದಡೇನೋ? 
ಕೂಡಲ ಸಂಗಮದೇವನ ಊಡವ ಆವಿಂಗೆ ಉಣ್ಣದ ಕರುವ ಬಿಟ್ಟಂತೆ.



15) ಲೋಕದ ಡೊಂಕ ನೀವೇಕೆ ತಿದ್ದುವಿರಿ? 
ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ
ನಿಮ್ಮ ನಿಮ್ಮ‌‌ ಮನವ ಸಂತೈಸಿಕೊಳ್ಳಿ
ನೆರೆಮನೆಯ ದು:ಖಕ್ಕೆ ಅಳುವವರ ಮೆಚ್ಚ ಕೂಡಲಸಂಗಮದೇವ.


16) ಹಬ್ಬಕ್ಕೆ ತಂದ ಹರಕೆಯ ಕುರಿ
ತೋರಣಕ್ಕೆ ತಂದ ತಳಿರ ಮೇಯಿತು
ಕೊಂದಹರೆಂಬುದನರಿಯದೆ ಬೆಂದ 
ಒಡಲ ಹೊರೆಯ ಹೋಯಿತು ಅಂದದೆ ಹೊಂದಿತು 
ಕೊಂದವರುಳಿದರೆ ಕೂಡಲಸಂಗಮದೇವ?



17) ಹಾವು ತಿಂದವರ ನುಡಿಸಬಹುದು
ಗರ ಹೊಡೆದವರ ನುಡಿಸಬಹುದು
ಸಿರಿಗರ ಹೊಡೆದವರ ನುಡಿಸಲು ಬಾರದು ನೋಡಯ್ಯ 
ಬಡತನವೆಂಬ ಮಂತ್ರವಾದಿ ಹೊಗಲು ಒಡನೆ ನುಡಿವರಯ್ಯಾ ಕೂಡಲಸಂಗಮದೇವ.

18) ಹಾವಿನ ಬಾಯಿ ಕಪ್ಪೆ ಹಸಿದು
ತಾ ಹಾರುವ ನೊಣಕಾಸೆ ಮಾಡುವಂತೆ,
ಶೂಲವನೇರುವ ಕಳ್ಳ ಹಾಲು ತುಪ್ಪವ ಕುಡಿದು
ಮೇಲಿನ್ನೇಸು ಕಾಲ ಬದುಕುವನೋ.
ಕೆಡುವೊಡಲ ನೆಚ್ಚಿ, ಕಡುಹುಸಿಯನೆ ಹುಸಿದು
ಒಡಲ ಹೊರೆವವರ ಮೆಚ್ಚ ನಮ್ಮ ಕೂಡಲಸಂಗಮದೇವ.


19) ಭಕ್ತರ ಕಂಡರೆ ಬೋಳಪ್ಪಿರಯ್ಯ;
ಸವಣರ ಕಂಡರೆ ಬತ್ತಲೆಯಪ್ಪಿರಯ್ಯ
ಹಾರುವರ ಕಂಡರೆ ಹರಿನಾಮವೆಂಬಿರಯ್ಯ;
ಅವರವರ ಕಂಡರೆ ಅವರವರಂತೆ
ಸೂಳೆಗೆ ಹುಟ್ಟಿದವರ ತೋರದಿರಯ್ಯ.
ಕೂಡಲಸಂಗಯ್ಯನ ಪೂಜಿಸಿ ಅನ್ಯದೈವಂಗಳಿಗೆರಗಿ
ಭಕ್ತರೆನಿಸಿಕೊಂಬ ಅಜ್ಞಾನಿಗಳ ನಾನೇನೆಂಬೆನಯ್ಯ.



20) ಸಾರ ಸಜ್ಜನರ ಸಂಗ ಲೇಸು ಕಂಡಯ್ಯಾ
ದೂರ ದುರ್ಜನರ ಸಂಗ ಭಂಗವಯ್ಯಾ
ಸಂಗವೆರಡುಂಟು ಒಂದ ಹಿಡಿ, ಒಂದ ಬಿಡು
ಮಂಗಳಮೂರ್ತಿ ನಮ್ಮ ಕೂಡಲಸಂಗಮದೇವನ ಶರಣರ.

ಜಗಜ್ಯೋತಿ ಬಸವೇಶ್ವರರು : ಪರಿಚಯ ಹಾಗೂ ಬಸವಣ್ಣನವರ 100 ವಚನಗಳ ಸಂಗ್ರಹ (Collection of The Top-100+ Basavanna Vachana in Kannada)


21) ಮರ್ತ್ಯ ಲೋಕವೆಂಬುದು ಕರ್ತಾರನ ಕಮ್ಮಟವಯ್ಯಾ
ಇಲ್ಲಿ ಸಲ್ಲುವವರು ಅಲ್ಲಿಯೂ ಸಲ್ಲುವರಯ್ಯಾ
ಇಲ್ಲಿ ಸಲ್ಲದವರು ಅಲ್ಲಿಯೂ ಸಲ್ಲರಯ್ಯಾ ಕೂಡಲಸಂಗಮದೇವ.



22) ನಾದಪ್ರಿಯ ಶಿವನೆಂಬರು ನಾದಪ್ರಿಯ ಶಿವನಲ್ಲಯ್ಯಾ
ವೇದಪ್ರಿಯ ಶಿವನೆಂಬರು ವೇದಪ್ರಿಯ ಶಿವನಲ್ಲಯ್ಯಾ
ನಾದವ ಮಾಡಿದ ರಾವಣಂಗೆ ಅರೆ ಆಯುಷ್ಯವಾಯಿತು
ವೇದವನೊದಿದ ಬ್ರಹ್ಮನ ಶಿರ ಹೋಯಿತು
ನಾದಪ್ರಿಯನೂ ಅಲ್ಲ ವೇದಪ್ರಿಯನೂ ಅಲ್ಲ 
ಭಕ್ತಿಪ್ರಿಯ ನಮ್ಮ ಕೂಡಲಸಂಗಮದೇವ.



23) ಮಾಡಿ ಮಾಡಿ ಕೆಟ್ಟರು ಮನವಿಲ್ಲದೆ
ನೀಡಿ ನೀಡಿ ಕೆಟ್ಟರು ನಿಜವಿಲ್ಲದೆ
ಮಾಡುವ ನೀಡುವ ನಿಜಗುಣವುಳ್ಳಡೆ ಕೂಡಿಕೊಂಬ ನಮ್ಮ ಕೂಡಲಸಂಗಮದೇವ...‌



24) ಕಳಬೇಡ ಕೊಲಬೇಡ ಹುಸಿಯ ನುಡಿಯಲು ಬೇಡ 
ಮುನಿಯಬೇಡ ಅನ್ಯರಿಗೆ ಅಸಹ್ಯ ಪಡಬೇಡ
ತನ್ನ ಬನ್ನಿಸಬೇಡ ಇದಿರ ಹಳಿಯಲು ಬೇಡ 
ಇದೆ ಅಂತರಂಗ ಶುದ್ಧಿ ಇದೆ ಬಹಿರಂಗ ‌ಶುದ್ಧಿ
ಇದೆ ನಮ್ಮ ಕೂಡಲಸಂಗಮದೇವನೊಲಿಸುವ ಪರಿ.


25) ಗಂಡ ಶಿವಲಿಂಗದೇವರ ಭಕ್ತ,
ಹೆಂಡತಿ ಮಾರಿಮಸಣಿಯ ಭಕ್ತೆ;
ಗಂಡ ಕೊಂಬುದು ಪಾದೋದಕಪ್ರಸಾದ,
ಹೆಂಡತಿ ಕೊಂಬುದು ಸುರೆಮಾಂಸ.
ಭಾಂಡ-ಭಾಜನ ಶುದ್ಧವಿಲ್ಲದವರ ಭಕ್ತಿ
ಹೆಂಡದ ಮಡಕೆಯ ಹೊರಗೆ ತೊಳೆದಂತೆ
ಕೂಡಲಸಂಗಮದೇವ.


26) ಕಂಡ ಭಕ್ತರಿಗೆ ಕೈಮುಗಿವಾತನೆ ಭಕ್ತ
ಮೃದು ವಚನ ಸಕಲ ಜಪಂಗಳಯ್ಯಾ 
ಮೃದು ವಚನ ಸಕಲ ತಪಂಗಳಯ್ಯಾ
ಸದುವಿನಯವೇ ಸದಾಶಿವನ ಒಲುಮೆಯಯ್ಯಾ
ಕೂಡಲಸಂಗಮದೇವನಂತಲ್ಲನಯ್ಯಾ.



27) ದಯವಿಲ್ಲದ ಧರ್ಮವದೇವುದಯ್ಯಾ
ದಯವೇ ಬೇಕು ಸಕಲ‌ ಪ್ರಾಣಿಗಳೆಲ್ಲರಲ್ಲಿಯೂ 
ದಯವೇ ಧರ್ಮದ ಮೂಲವಯ್ಯಾ 
ಕೂಡಲಸಂಗಮದೇವನಂತಲ್ಲನಯ್ಯಾ.



28) ಎನಗಿಂತ ಕಿರಿಯರಿಲ್ಲ 
ಶಿವಭಕ್ತರಿಗಿಂತ ಹಿರಿಯರಿಲ್ಲ
ನಿಮ್ಮ ಪಾದಸಾಕ್ಷಿ ಎನ್ನ ಮನಸಾಕ್ಷಿ 
ಕೂಡಲಸಂಗಮದೇವ ಎನಗಿದೆ ದಿವ್ಯ.



29) ಬ್ರಹ್ಮಪದವಿಯನೊಲ್ಲೇ 
ವಿಷ್ಣುಪದವಿಯನೊಲ್ಲೆ 
ರುದ್ರಪದವಿಯನೊಲ್ಲೇ 
ನಾನು ಮತ್ತಾವಪದವಿಯನೊಲ್ಲೆನಯ್ಯಾ 
ಕೂಡಲಸಂಗಮದೇವ ನಿಮ್ಮ ಸದ್ಭಕ್ತರ ಪಾದವನರಿದಿಪ್ಪ ಮಹಾಪದವಿಯ ಕರುಣಿಸಯ್ಯಾ.



30) ಚಕೋರಂಗೆ ಚಂದ್ರಮನಾ ಬೆಳಗಿನಾ ಚಿಂತೆ 
ಅಂಬುಜಕೆ ಬಾನುವಿನ ಉದಯದಾ ಚಿಂತೆ
ಭ್ರಮರಂಗೆ ಪರಿಮಳದಾ ಬಂಡುಂಬ‌‌ ಚಿಂತೆ 
ಎನಗೆ ನಮ್ಮ ಕೂಡಲಸಂಗಮದೇವರ ನೆನೆವ ಚಿಂತೆ.

ಜಗಜ್ಯೋತಿ ಬಸವೇಶ್ವರರು : ಪರಿಚಯ ಹಾಗೂ ಬಸವಣ್ಣನವರ 100 ವಚನಗಳ ಸಂಗ್ರಹ (Collection of The Top-100+ Basavanna Vachana in Kannada)


31) ಎನ್ನ ಮನವೆಂಬ ಮರ್ಕಟನು
ತನುವಿಕಾರವೆಂಬ ಅಲ್ಪಸುಖದಾಸೆ ಮಾಡಿ,
ವೃಥಾ ಭ್ರಮಣಗೊಂಡು, ನಾನಾ ದೆಸೆಗೆ ಲಂಘಿಸಿ ಅಳಲಿಸಿ ಬಳಲಿಸುತ್ತಿದೆ ನೋಡಾ.
ಕೂಡಲಸಂಗಮದೇವರೆಂಬ ವೃಕ್ಷಕ್ಕೆ ಲಂಘಿಸಿ
ಅಪರಿಮಿತ ಸುಖವನೆಯ್ದದು ನೋಡಾ.

32) ತುಪ್ಪದ ಸವಿಗೆ ಅಲಗ ನೆಕ್ಕುವ
ಸೊಣಗನಂತೆನ್ನ ಬಾಳುವೆ
ಸಂಸಾರಸಂಗವ ಬಿಡದು ನೋಡೆನ್ನ ಮನವು.
ಈ ನಾಯಿತನವ ಮಾಣಿಸು
ಕೂಡಲಸಂಗಮದೇವಯ್ಯ ನಿಮ್ಮ ಧರ್ಮ.


33) ವಚನದ ಹುಸಿ-ನುಸುಳೆಂತು ಮಾಬುದೆನ್ನ.
ಮನದ ಮರ್ಕಟತನವೆಂತು ಮಾಬುದೆನ್ನ.
ಹೃದಯದ ಕಲ್ಮಷವೆಂತು ಮಾಬುದೆನ್ನ.
ಕಾಯವಿಕಾರಕ್ಕೆ ತರಿಸಲುವೋದೆನು.
ಎನಗಿದು ವಿಧಿಯೇ, ಕೂಡಲಸಂಗಮದೇವ.


34) ವಿಕಳನಾದೆನು ಪಂಚೇಂದ್ರಿಯಧಾತುವಿಂದ.
ಮತಿಗೆಟ್ಟನು ಮನದ ವಿಕಾರದಿಂದ.
ಧೃತಿಗೆಟ್ಟೆನು ಕಾಯವಿಕಾರದಿಂದ.
ಶರಣುವೊಕ್ಕೆನು ಕೂಡಲಸಂಗಮದೇವಯ್ಯ
ಎನ್ನುವನು ಕಾಯಯ್ಯ.


 

35) ಸೂರ್ಯನ ಉದಯ ತಾವರೆಗೆ ಜೀವಾಳ 
ಚಂದ್ರಮನುದಯ ನೈದಿಲೆಗೆ ಜೀವಾಳ 
ಕೂಪರ ಠಾವಿನಲ್ಲಿ ಕೂಟ ಜೀವಾಳ
ಒಲಿದ ಠಾವಿನಲ್ಲಿ ನೊಟ ಜೀವಾಳವಯ್ಯಾ 
ಕೂಡಲಸಂಗಮದೇವನ ಶರಣರ ಬರವೆನೆಗೆ ಪ್ರಾಣ ಜೀವಾಳವಯ್ಯಾ...‌


36) ಕಾಗೆ ಒಂದಗುಳ ಕಂಡರೆ ಕೂಗಿ ಕರೆಯದೆ ತನ್ನ ಬಳಗವನು?
ಕೋಳಿಯೊಂದು ಕುಟುಕ ಕಂಡಡೆ ಕೂಗಿ ಕರೆಯದೆ ತನ್ನ ಕುಲವೆಲ್ಲವನು?
ಭಕ್ತನಾಗಿ ಭಕ್ತಿಪಕ್ಷವಿಲ್ಲದಿದ್ದೊಡೆ ಕಾಗೆ ಕೋಳಿಯಿಂದ ಕರಕಷ್ಟ ಕೂಡಲಸಂಗಮದೇವ? 



37) ತಂದೆ ನೀನು ತಾಯಿ ನೀನು 
ಬಂಧು ನೀನು ಬಳಗ ನೀನು
ನೀನಲ್ಲದೆ ಮತ್ತಾರೂ ಇಲ್ಲವಯ್ಯ
ಕೂಡಲಸಂಗಮದೇವ‌‌‌...‌



38) ವಚನದಲ್ಲಿ ನಾಮಾಮೃತ ತುಂಬಿ 
ನಯನದಲ್ಲಿ ನಿಮ್ಮ ಮೂರುತಿ ತುಂಬಿ
ಕಿವಿಯಲ್ಲಿ ನಿಮ್ಮ ಕಿರುತಿ ತುಂಬಿ
ಮನದಲ್ಲಿ ನಿಮ್ಮ ನೆನವು ತುಂಬಿ ಕೂಡಲಸಂಗಮದೇವ 
ನಿಮ್ಮ ‌ಚರಣ ಕಮಲದೊಳಗಾನು ತುಂಬಿ.

39) ಜ್ಞಾನಾಮೃತವೆಂಬ ಜಲಧಿಯ ಮೇಲೆ
ಸಂಸಾರವೆಂಬ ಹಾವಸೆ ಮುಸುಕಿಹುದು.
ನೀರ ಮೊಗೆವವರು ಬಂದು ನೂಕಿದಲ್ಲದೆ ತೆರಳದು.
ಮರಳಿ ಮರಳಿ ಮುಸುಕುವುದು ಮಾಣದಯ್ಯ.
ಆಗಳೂ ಎನ್ನುವನು ನೆನೆವುತ್ತಿರಬೇಕೆಂದು-
ಬೇಗ ಗುರು ಅಪ್ಪೈಸಿ ತನ್ನ ಪ್ರಸಾದವೆಂದು ಕುರುಹ ಕೊಟ್ಟನು.
ದಿವಾರಾತ್ರಿ ಮಾಡ ಹೇಳಿದ ಲಿಂಗಪೂಜೆಯ, ತನ್ನನರಿಯಬೇಕೆಂದು.
ಕೆರೆಯ ನೀರನುಂಡು ತೊರೆಯ ನೀರ ಹೊಗಳುವ ಅರೆಮರುಳುಗಳ ಮೆಚ್ಚ ನಮ್ಮ ಕೂಡಲಸಂಗಮದೇವ.



40) ಮಡಕೆಯ ಮಾಡುವಡೆ ಮಣ್ಣೇ ಮೊದಲು,
ತೊಡಿಗೆಯ ಮಾಡುವಡೆ ಹೊನ್ನೇ ಮೊದಲು,
ಶಿವಪಥವನರಿವಡೆ ಗುರುಪಾದವೇ ಮೊದಲು
ಕೂಡಲಸಂಗಮದೇವನರಿವಡೆ ಶರಣರ ಸಂಗವೇ ಮೊದಲು.

ಜಗಜ್ಯೋತಿ ಬಸವೇಶ್ವರರು : ಪರಿಚಯ ಹಾಗೂ ಬಸವಣ್ಣನವರ 100 ವಚನಗಳ ಸಂಗ್ರಹ (Collection of The Top-100+ Basavanna Vachana in Kannada)


41) ಅಯ್ಯಾ, ನೀನು ನಿರಾಕಾರವಾದಲ್ಲಿ
ನಾನು ಜ್ಞಾನವೆಂಬ ವಾಹನವಾಗಿದ್ದೆ ಕಾಣಾ.
ಅಯ್ಯಾ, ನೀನು ನಾಂಟ್ಯಕ್ಕೆ ನಿಂದಲ್ಲಿ
ನಾನು ಚೈತನ್ಯವೆಂಬ ವಾಹನವಾಗಿದ್ದೆ ಕಾಣಾ.
ಅಯ್ಯಾ, ನೀನು ಸಾಕಾರವಾಗಿದ್ದಲ್ಲಿ
ನಾನು ವೃಷಭನೆಂಬ ವಾಹನವಾಗಿದ್ದೆ ಕಾಣಾ.
ಅಯ್ಯಾ, ನೀನೆನ್ನ ಭವವ ಕೊಂದಹೆನೆಂದು
ಜಂಗಮಲಾಂಛನವಾಗಿ ಬಂದಲ್ಲಿ
ನಾನು ಭಕ್ತನೆಂಬ ವಾಹನವಾಗಿದ್ದೆ ಕಾಣಾ ಕೂಡಲಸಂಗಮದೇವ.

42) ಭಕ್ತಿಯೆಂಬ ಪೃಥ್ವಿಯ ಮೇಲೆ 
ಗುರುಯೆಂಬ ಬೀಜವಂಕುರುಸಿ 
ಲಿಂಗವೆಂಬ ಎಲೆಯಾಯಿತು.
ಲಿಂಗವೆಂಬ ಎಲೆಯ ಮೇಲೆ 
ವಿಚಾರವೆಂಬ ಹೂವಾಯಿತು
ಆಚಾರವೆಂಬ ಕಾಯಾಯಿತು
ನಿಷ್ಪತ್ತಿಯೆಂಬ ಹಣ್ಣಾಯಿತು.
ನಿಷ್ಪತ್ತಿಯೆಂಬ ಹಣ್ಣು‌ ತೊಟ್ಟುಬಿಟ್ಟು ಕಳಚಿ ಬೀಳುವಲ್ಲಿ ಕೂಡಲಸಂಗಮದೇವ ತನಗೆ ಬೇಕೆಂದು ಎತ್ತಿಕೊಂಡ.



43) ಇಬ್ಬರು ಮೂವರು ದೇವರೆಂದು ಉಬ್ಬಿ ಮಾತನಾಡಬೇಡ 
ಒಬ್ಬನೆ ಕಾಣಿರೋ ಇಬ್ಬರೆಂಬುದು ಹುಸಿನೋಡಾ 
ಕೂಡಲಸಂಗಮದೇವನಲ್ಲದೆ ಇಲ್ಲವೆಂದಿತು ವೇದ.



44)  ನೀರ ಕಂಡಲ್ಲಿ ಮುಳುಗುವರಯ್ಯಾ
ಮರವ ಕಂಡಲ್ಲಿ ಸುತ್ತುವರಯ್ಯಾ
ಬತ್ತುವ ಜಲವ ಒಣಗುವ ಮರವ ಮೆಚ್ಚಿದವರು ನಿಮ್ಮ ನೆತ್ತ ಬಲ್ಲರಯ್ಯಾ ಕೂಡಲಸಂಗಮದೇವಾ...‌



45) ಕೊಲುವವನೆ ಮಾದಿಗ 
ಹೊಲಸು ತಿಂಬುವವನೆ ಹೊಲೆಯ 
ಕುಲವೇನು ಆವಂದಿರ ಕುಲವೇನು
ಸಕಲ ಜೀವಾತ್ಮರಿಗೆ ಲೇಸನ್ನೆ ಬಯಸುವ ನಮ್ಮ‌ ಕೂಡಲಸಂಗಮದೇವನ ಶರಣರೆ ಕುಲಜರು.



46) ದೇವನೊಬ್ಬ ನಾಮ ಹಲವು
ಪರಮ ಪತಿವ್ರತೆಗೆ ಗಂಡನೊಬ್ಬ
ಮತ್ತೊಂದಕ್ಕೆರಗಿದಡೆ ಕಿವಿ ಮೂಗು ಕೊಯ್ಯುವನು
ಹಲವು ದೈವದ ಎಂಜಲ ತಿಂಬವರನೆಂಬೆ ಕೂಡಲಸಂಗಮದೇವ.



47) ನೂರನೋದಿ ನೂರ ಕೇಳಿದಡೇನು?
ಆಸೆ ಹರಿಯದು, ರೋಷ ಬಿಡದು.
ಮಜ್ಜನಕ್ಕೆರೆದು ಫಲವೇನು?
ಮಾತಿನಂತೆ ಮನವಿಲ್ಲದ ಜಾತಿ ಡೊಂಬರ ನೋಡಿ 
ನಗುವ ನಮ್ಮ ಕೂಡಲಸಂಗಮದೇವ.



48) ನುಡಿದರೆ ಮುತ್ತಿನ ಹಾರದಂತಿರಬೇಕು,
ನುಡಿದರೆ ಮಾಣಿಕ್ಯದ ದೀಪ್ತಿಯಂತಿರಬೇಕು
ನುಡಿದರೆ ಸ್ಪಟಿಕದ ಸಲಾಕೆಯಂತಿರಬೇಕು
ನುಡಿದರೆ ಲಿಂಗ ಮೆಚ್ಚಿ ಅಹುದಹುದೆನಬೇಕು
ನುಡಿಯೊಳಗಾಗಿ ನಡೆಯದಿದ್ದಡೆ 
ಕೂಡಲಸಂಗಮದೇವನೆಂತೊಲಿವನಯ್ಯಾ?



49) ಉಳ್ಳವರು ಶಿವಾಲಯ ಮಾಡುವರು
ನಾನೇನು ಮಾಡಲಿ ಬಡವನಯ್ಯಾ?
ಎನ್ನ ಕಾಲೆ ಕಂಭ, ದೇಹವೆ ದೇಗುಲ
 ಶಿರವೆ ಹೊನ್ನ ಕಲಶವಯ್ಯಾ
ಕೂಡಲಸಂಗಮದೇವಾ ಕೇಳಯ್ಯಾ
ಸ್ಥಾವರಕ್ಕಳಿವುಂಟು ಜಂಗಮಕ್ಕಳಿವಿಲ್ಲ.



50) ಜ್ಞಾನದ ಬಲದಿಂದ ಅಜ್ಞಾನದ ಕೇಡು ನೋಡಯ್ಯಾ
ಜ್ಯೋತಿಯ ಬಲದಿಂದ ತಮಂಧದ ಕೇಡು ನೋಡಯ್ಯಾ
ಸತ್ಯದ ಬಲದಿಂದ ಅಸತ್ಯದ ಕೇಡು ನೋಡಯ್ಯಾ
ಪರುಷದ ಬಲದಿಂದ ಅವಲೋಹದ ಕೇಡು ನೋಡಯ್ಯಾ 
ಕೂಡಲಸಂಗಮದೇವನ ಶರಣರ ಅನುಭಾವದಿಂದ ಎನ್ನ ಭವದ ಕೇಡು ನೋಡಯ್ಯಾ.



51) ಕಂಗಳ ತುಂಬಿದ ಬಳಿಕ ನೋಡಲಿಲ್ಲ
ಕಿವಿಗಳು ತುಂಬಿದ ಬಳಿಕ‌ ಕೇಳಲಿಲ್ಲ
ಕೈಗಳು ತುಂಬಿದ ಬಳಿಕ‌ ಪೂಜಿಸಲಿಲ್ಲ
ಮನ ತುಂಬಿದ ಬಳಿಕ ನೆನೆಯಲಿಲ್ಲ
ಮಹಾಂತ ಕೂಡಲಸಂಗಮದೇವನ.

52) ಚಂದ್ರಮನಂತೆ ಕಳೆ ಸಮನಿಸಿತ್ತೆನಗೆ
ಸಂಸಾರವೆಂಬ ರಾಹು ಸರ್ವಗ್ರಾಸಿಯಾಗಿ ನುಂಗಿತ್ತಯ್ಯ,
ಇಂದೆನ್ನ ದೇಹಕ್ಕೆ ಗ್ರಹಣವಾಯಿತ್ತು.
ಇನ್ನೆಂದಿಂಗೆ ಮೋಕ್ಷವಹುದೋ. ಕೂಡಲಸಂಗಮದೇವ.

53) ಸಂಸಾರವೆಂಬ ಸರ್ಪ ಮುಟ್ಟಲು
ಪಂಚೇಂದ್ರಿಯವಿಷಯವೆಂಬ
ವಿಷದಿಂದಾನು ಮುಂದುಗೆಟ್ಟೆನಯ್ಯ,
ಆನು ಹೊರಳಿ ಬೀಳುತ್ತಿದ್ದೆನಯ್ಯ;
‘ಓಂ ನಮಶ್ಶಿವಾಯ’ ಎಂಬ ಮಂತ್ರವ ಜಪಿಸುತ್ತಿದ್ದೆನಯ್ಯ
ಕೂಡಲಸಂಗಮದೇವ.



54) ಬೆಳೆಯ ಭೂಮಿಯಲೊಂದು ಪ್ರಳಯದ ಕಸ ಹುಟ್ಟಿ,
ತಿಳಿಯಲೀಯದು; ಎಚ್ಚರಲೀಯದು.
ಎನ್ನವಗುಣವೆಂಬ ಕಸವ ಕಿತ್ತು ಸಲಹಯ್ಯ ಲಿಂಗತಂದೆ.
ಸುಳಿದೆಗೆದು ಬೆಳೆವೆನು ಕೂಡಲಸಂಗಮದೇವ.


55) ಹಾಡಿದಡೆ ಎನ್ನೊಡೆಯನ ಹಾಡುವೆ
ಬೇಡಿದಡೆ ಎನ್ನೊಡೆಯನ ಬೇಡುವೆ 
ಒಡೆಯಂಗೊಡಲ ತೋರಿ ಎನ್ನ ಬಡತನವ ಬಿನೈಸುವೆ.
ಒಡೆಯ ಮಹಾದಾನಿ ಕೂಡಲಸಂಗಮದೇವಂಗೆ ಸೆರೆಗೊಡ್ಡಿ ಬೇಡುವೆ‌‌‌.

ಜಗಜ್ಯೋತಿ ಬಸವೇಶ್ವರರು : ಪರಿಚಯ ಹಾಗೂ ಬಸವಣ್ಣನವರ 100 ವಚನಗಳ ಸಂಗ್ರಹ (Collection of The Top-100+ Basavanna Vachana in Kannada)


56) ನಂಬರು ನಚ್ಚರು ಬರಿದೆ ಕರೆವರು
ನಂಬಲರಿಯರೀ ಲೋಕದ ಮನುಜರು
ನಂಬಿ ಕರೆದಡೆ ಓ ಎನ್ನನೆ ಶಿವನು?
ನಂಬದೆ ನಚ್ಚದೆ ಬರಿದೆ ಕರೆವರ ಕೊಂಬ ಮೆಟ್ಟಿ ಕೂಗೆಂದ ಕೂಡಲಸಂಗಮದೇವ.



57) ಬಚ್ಚಲ ನೀರು ತಿಳಿಯಾದಡೇನು?
ಸಲ್ಲದ ಹೊನ್ನು ಮತ್ತೆಲ್ಲಿದ್ದಡೇನು?
ಆಕಾಶದ ಮಾವಿನ ಫಲವೆಂದಡೇನು?
ಕೊಯ್ಯಲಿಲ್ಲ ಮೆಲ್ಲಲಿಲ್ಲ
ಕೂಡಲಸಂಗಮದೇವನ ಶರಣರ ಅನುಭಾವವಿಲ್ಲದವರು ಎಲ್ಲಿದ್ದಡೇನು ಎಂತಾದಡೇನು? 



42) ಒಲವಿಲ್ಲದ ಪೂಜೆ ನೇಹವಿಲ್ಲದ ಮಾಟ
ಆ ಪೂಜೆಯು ಆ ಮಾಟವು ಚಿತ್ರದ ರೂಹು ಕಾಣಿರಣ್ಣಾ 
ಚಿತ್ರದ ಕಬ್ಬು ಕಾಣಿರಣ್ಣಾ 
ಅಪ್ಪಿದಡೆ ಸುಖವಿಲ್ಲ ಮೆಲಿದಡೆ ರುಚಿಯಿಲ್ಲ 
ಕೂಡಲಸಂಗಮದೇವ ನಿಜವಲ್ಲದವನ ಭಕ್ತಿ.



58) ಪಾಪಿಯ ಧನ ಪ್ರಾಯಶ್ಚಿತ್ತಕ್ಕಲ್ಲದೆ ಸತ್ಪಾತ್ರಕ್ಕೆ ಸಲ್ಲದಯ್ಯಾ
ನಾಯಿಯ ಹಾಲು ನಾಯಿಮರಿಗಲ್ಲದೆ ಮಾಡುವ ಅರ್ಥ ವ್ಯರ್ಥ ಕಂಡಯ್ಯಾ ಕೂಡಲಸಂಗಮದೇವ.



59) ದೇವಲೋಕ ಮೃತ್ಯು ಲೋಕವೆಂಬುದು ಬೇರಿಲ್ಲ ಕಾಣಿರೋ
ಸತ್ಯವ ನುಡಿಯುವುದೆ ದೇವಲೋಕ
ಮಿತ್ಯವ ನುಡಿಯುವುದೆ ಮೃತ್ಯು ಲೋಕ
ಆಚಾರವೇ ಸ್ವರ್ಗ ಅನಾಚಾರವೆ ನರಕ
ಕೂಡಲಸಂಗಮದೇವಾ ನೀವೇ ಪ್ರಮಾಣು.



60) ಜಗದಗಲ ಮುಗಿಲಗಲ ಮಿಗೆಯಗಲ
 ನಿಮ್ಮಗಲ ಪಾತಾಳದಿಂದತ್ತ ನಿಮ್ಮ ಶ್ರೀಚರಣ.
ಬ್ರಹ್ಮಾಂಡದಿಂದೆತ್ತ ನಿಮ್ಮ ಶ್ರೀಮುಕುಟ
ಅಪ್ರಮಾಣ ಅಗಮ್ಯ ಅಗೋಚರ ಅಪ್ರತಿಮ‌ 
ಲಿಂಗವೆ ಕೂಡಲಸಂಗಮದೇವ‌ ಎನ್ನ ಕರಸ್ಥಲಕ್ಕೆ ಬಂದು ಚುಳುಕಾದಿರಯ್ಯಾ.


61) ನೀ ಹುಟ್ಟಿಸಿದಲ್ಲಿ ಹುಟ್ಟಿ, ನೀ ಕೊಂದಲ್ಲಿ ಸಾಯದೆ ಎನ್ನ ವಶವೇ ಅಯ್ಯ.
ನೀನಿರಿಸಿದಲ್ಲಿ ಇರದೆ ಎನ್ನ ವಶವೇ ಅಯ್ಯ.
ಅಕಟಕಟಾ ಎನ್ನವನೆನ್ನವನೆನ್ನಯ್ಯ ಕೂಡಲಸಂಗಮದೇವಯ್ಯ.


62) ಮನೆಯೊಳಗೆ ಮನೆಯೊಡೆಯನಿದ್ದಾನೊ ಇಲ್ಲವೊ.
ಹೊಸ್ತಿಲಲ್ಲಿ ಹುಲ್ಲು ಹುಟ್ಟಿ, ಮನೆಯೊಳಗೆ ರಜ ತುಂಬಿ ಮನೆಯೊಳಗೆ ಮನೆಯೊಡೆಯನಿಲ್ಲ.
ತನುವಿನಲಿ ಹುಸಿ ತುಂಬಿ, ಮನದಲ್ಲಿ ವಿಷಯ ತುಂಬಿ ಮನೆಯೊಳಗೆ ಮನೆಯೊಡೆಯನಿಲ್ಲ.
ಕೂಡಲಸಂಗಮದೇವ.


63) ಹಬ್ಬಕ್ಕೆ ತಂದ ಹರಕೆಯ ಕುರಿ
ತೋರಣಕ್ಕೆ ತಂದ ತಳಿರ ಮೇಯಿತ್ತು.
ಕೊಂದಹರೆಂಬುದನರಿಯದೆ ಬೆಂದೊಡಲ ಹೊರೆಯ ಹೋಯಿತ್ತು.
ಅದಂದೆ ಹುಟ್ಟಿತು, ಅದಂದೆ ಹೊಂದಿತ್ತು.
ಕೊಂದವರುಳಿದರೆ ಕೂಡಲಸಂಗಮದೇವ

64) ಅಯ್ಯಾ, ನೀನು ನಿರಾಕಾರವಾದಲ್ಲಿ
ನಾನು ಜ್ಞಾನವೆಂಬ ವಾಹನವಾಗಿದ್ದೆ ಕಾಣಾ.
ಅಯ್ಯಾ, ನೀನು ನಾಂಟ್ಯಕ್ಕೆ ನಿಂದಲ್ಲಿ
ನಾನು ಚೈತನ್ಯವೆಂಬ ವಾಹನವಾಗಿದ್ದೆ ಕಾಣಾ.
ಅಯ್ಯಾ, ನೀನು ಸಾಕಾರವಾಗಿದ್ದಲ್ಲಿ
ನಾನು ವೃಷಭನೆಂಬ ವಾಹನವಾಗಿದ್ದೆ ಕಾಣಾ.
ಅಯ್ಯಾ, ನೀನೆನ್ನ ಭವವ ಕೊಂದಹೆನೆಂದು
ಜಂಗಮಲಾಂಛನವಾಗಿ ಬಂದಲ್ಲಿ
ನಾನು ಭಕ್ತನೆಂಬ ವಾಹನವಾಗಿದ್ದೆ ಕಾಣಾ ಕೂಡಲಸಂಗಮದೇವ.



65) ಚಂದ್ರಮನಂತೆ ಕಳೆ ಸಮನಿಸಿತ್ತೆನಗೆ
ಸಂಸಾರವೆಂಬ ರಾಹು ಸರ್ವಗ್ರಾಸಿಯಾಗಿ ನುಂಗಿತ್ತಯ್ಯ,
ಇಂದೆನ್ನ ದೇಹಕ್ಕೆ ಗ್ರಹಣವಾಯಿತ್ತು.
ಇನ್ನೆಂದಿಂಗೆ ಮೋಕ್ಷವಹುದೋ. ಕೂಡಲಸಂಗಮದೇವ.


66) ನಾದಪ್ರಿಯ ಶಿವನೆಂಬರು ನಾದಪ್ರಿಯ ಶಿವನಲ್ಲ
ವೇದಪ್ರಿಯ ಶಿವನೆಂಬರು ವೇದಪ್ರಿಯ ಶಿವನಲ್ಲ
ನಾದವ ಮಾಡಿದ ರಾವಣಂಗೆ ಅರೆಯಾಯುಷವಾಯ್ತು
ವೇದವನೋದಿದ ಬ್ರಹ್ಮನ ಶಿರಹೋಯ್ತು
ನಾದಪ್ರಿಯನೂ ಅಲ್ಲ ವೇದಪ್ರಿಯನೂ ಅಲ್ಲ
ಭಕ್ತಿಪ್ರಿಯ ನಮ್ಮ ಕೂಡಲಸಂಗಮದೇವ!

67) ಉಳ್ಳವರು ಶಿವಾಲಯವ ಮಾಡುವರು
ನಾನೇನು ಮಾಡಲಿ ಬಡವನಯ್ಯ?
ಎನ್ನ ಕಾಲೇ ಕಂಬ ದೇಹವೆ ದೇಗುಲ
ಶಿರವೇ ಹೊನ್ನ ಕಳಸವಯ್ಯ!
ಕೂಡಲಸಂಗಮ ದೇವ ಕೇಳಯ್ಯ
ಸ್ಥಾವರಕ್ಕಳಿವುಂಟು ಜಂಗಮಕ್ಕಳಿವಿಲ್ಲ!

68) ಚಕೋರಂಗೆ ಚಂದ್ರಮನ ಬೆಳಕಿನ ಚಿಂತೆ
ಅಂಬುಜಕೆ ಭಾನುವಿನ ಉದಯದ ಚಿಂತೆ
ಭ್ರಮರಂಗೆ ಪರಿಮಳದ ಬಂಡುಂಬ ಚಿಂತೆ
ಎನಗೆ ಎನ್ನ ಕೂಡಲಸಂಗಮದೇವನ ನೆನೆವುದೆ ಚಿಂತೆ!



69) ಮಡಕೆಯ ಮಾಡುವಡೆ ಮಣ್ಣೆ ಮೊದಲು,
ತೊಡಿಗೆಯ ಮಾಡುವಡೆ ಹೊನ್ನೆ ಮೊದಲು,
ಶಿವಪಥವನರಿವಡೆ ಗುರುಪಥವೆ ಮೊದಲು,
ಕೂಡಲಸಂಗಮದೇವರನರಿವಡೆ
ಶರಣರ ಸಂಗವೆ ಮೊದಲು.

70) ಸಂಸಾರವೆಂಬ ಸರ್ಪ ಮುಟ್ಟಲು
ಪಂಚೇಂದ್ರಿಯವಿಷಯವೆಂಬ
ವಿಷದಿಂದಾನು ಮುಂದುಗೆಟ್ಟೆನಯ್ಯ,
ಆನು ಹೊರಳಿ ಬೀಳುತ್ತಿದ್ದೆನಯ್ಯ;
‘ಓಂ ನಮಶ್ಶಿವಾಯ’ ಎಂಬ ಮಂತ್ರವ ಜಪಿಸುತ್ತಿದ್ದೆನಯ್ಯ ಕೂಡಲಸಂಗಮದೇವ.

ಜಗಜ್ಯೋತಿ ಬಸವೇಶ್ವರರು : ಪರಿಚಯ ಹಾಗೂ ಬಸವಣ್ಣನವರ 100 ವಚನಗಳ ಸಂಗ್ರಹ (Collection of The Top-100+ Basavanna Vachana in Kannada)


71) ಎನ್ನ ಮನವೆಂಬ ಮರ್ಕಟನು
ತನುವಿಕಾರವೆಂಬ ಅಲ್ಪಸುಖದಾಸೆ ಮಾಡಿ,
ವೃಥಾ ಭ್ರಮಣಗೊಂಡು, ನಾನಾ ದೆಸೆಗೆ ಲಂಘಿಸಿ ಅಳಲಿಸಿ ಬಳಲಿಸುತ್ತಿದೆ ನೋಡಾ.
ಕೂಡಲಸಂಗಮದೇವರೆಂಬ ವೃಕ್ಷಕ್ಕೆ ಲಂಘಿಸಿ
ಅಪರಿಮಿತ ಸುಖವನೆಯ್ದದು ನೋಡಾ.

72) ನೀರಿಂಗೆ ನೈದಿಲೆಯೆ ಶೃಂಗಾರ,
ಸಮುದ್ರಕ್ಕೆ ತೆರೆಯೆ ಶೃಂಗಾರ,
ನಾರಿಗೆ ಗುಣವೆ ಶೃಂಗಾರ,
ಗಗನಕ್ಕೆ ಚಂದ್ರಮನೆ ಶೃಂಗಾರ,
ನಮ್ಮ ಕೂಡಲಸಂಗನ ಶರಣರಿಗೆ
ನೊಸಲ ವಿಭೂತಿಯೆ ಶೃಂಗಾರ.


73) ಎನ್ನ ಮನದಲ್ಲಿ ಮತ್ತೊಂದನರಿಯೆನಯ್ಯಾ,
ಓಂ ನಮಃ ಶಿವಾಯ, ಓಂ ನಮಃ ಶಿವಾಯ
ಎನಗಿದೆ ಮಂತ್ರ, ಇದೇ ಜಪ.
ಕೂಡಲಸಂಗಮದೇವಾ ನೀನೆ ಬಲ್ಲೆ, ಎಲೆ ಲಿಂಗವೆ.

74) ಗಂಡನ ಮೇಲೆ ಸ್ನೇಹವಿಲ್ಲದ ಹೆಂಡತಿ,
ಲಿಂಗದ ಮೇಲೆ ನಿಷ್ಠೆಯಿಲ್ಲದ ಭಕ್ತ,
ಇದ್ದಡೇನೊ ಶಿವ ಶಿವಾ ಹೋದಡೇನೊ
ಕೂಡಲಸಂಗಮದೇವಯ್ಯಾ
ಊಡದ ಆವಿಂಗೆ ಉಣ್ಣದ ಕರುವ ಬಿಟ್ಟಂತೆ.

75) ಸಾರ: ಸಜ್ಜನರ ಸಂಗವ ಮಾಡೂದು,
ದೂರ ದುರ್ಜನರ ಸಂಗ ಬೇಡವಯ್ಯಾ.
ಆವ ಹಾವಾದಡೇನು:ವಿಷವೊಂದೆ,
ಅಂತವರ ಸಂಗ ಬೇಡವಯ್ಯಾ.
ಅಂತರಂಗ ಶುದ್ಧವಿಲ್ಲದವರ ಸಂಗವು
ಸಿಂಗಿ, ಕಾಳಕೂಟ ವಿಷವೊ, ಕೂಡಲಸಂಗಯ್ಯಾ.

v



76) ಸಾರ ಸಜ್ಜನರ ಸಂಗ ಲೇಸು ಕಂಡಯ್ಯಾ,
ದೂರ ದುರ್ಜನರ ಸಂಗವದು ಭಂಗವಯ್ಯಾ.
ಸಂಗವೆರಡುಂಟು:ಒಂದ ಹಿಡಿ, ಒಂದ ಬಿಡು,
ಮಂಗಳಮೂರ್ತಿ ನಮ್ಮ ಕೂಡಲಸಂಗನ ಶರಣರ.

77) ತುಪ್ಪದ ಸವಿಗೆ ಅಲಗ ನೆಕ್ಕುವ
ಸೊಣಗನಂತೆನ್ನ ಬಾಳುವೆ
ಸಂಸಾರಸಂಗವ ಬಿಡದು ನೋಡೆನ್ನ ಮನವು.
ಈ ನಾಯಿತನವ ಮಾಣಿಸು
ಕೂಡಲಸಂಗಮದೇವಯ್ಯ ನಿಮ್ಮ ಧರ್ಮ.

78) ವಚನದ ಹುಸಿ-ನುಸುಳೆಂತು ಮಾಬುದೆನ್ನ.
ಮನದ ಮರ್ಕಟತನವೆಂತು ಮಾಬುದೆನ್ನ.
ಹೃದಯದ ಕಲ್ಮಷವೆಂತು ಮಾಬುದೆನ್ನ.
ಕಾಯವಿಕಾರಕ್ಕೆ ತರಿಸಲುವೋದೆನು.
ಎನಗಿದು ವಿಧಿಯೇ, ಕೂಡಲಸಂಗಮದೇವ.

79) ವಿಕಳನಾದೆನು ಪಂಚೇಂದ್ರಿಯಧಾತುವಿಂದ.
ಮತಿಗೆಟ್ಟನು ಮನದ ವಿಕಾರದಿಂದ.
ಧೃತಿಗೆಟ್ಟೆನು ಕಾಯವಿಕಾರದಿಂದ.
ಶರಣುವೊಕ್ಕೆನು ಕೂಡಲಸಂಗಮದೇವಯ್ಯ
ಎನ್ನುವನು ಕಾಯಯ್ಯ.

80) ಬೆಳೆಯ ಭೂಮಿಯಲೊಂದು ಪ್ರಳಯದ ಕಸ ಹುಟ್ಟಿ,
ತಿಳಿಯಲೀಯದು; ಎಚ್ಚರಲೀಯದು.
ಎನ್ನವಗುಣವೆಂಬ ಕಸವ ಕಿತ್ತು ಸಲಹಯ್ಯ ಲಿಂಗತಂದೆ.
ಸುಳಿದೆಗೆದು ಬೆಳೆವೆನು ಕೂಡಲಸಂಗಮದೇವ.

ಜಗಜ್ಯೋತಿ ಬಸವೇಶ್ವರರು : ಪರಿಚಯ ಹಾಗೂ ಬಸವಣ್ಣನವರ 100 ವಚನಗಳ ಸಂಗ್ರಹ (Collection of The Top-100+ Basavanna Vachana in Kannada)


81) ಮನೆಯೊಳಗೆ ಮನೆಯೊಡೆಯನಿದ್ದಾನೊ ಇಲ್ಲವೊ.
ಹೊಸ್ತಿಲಲ್ಲಿ ಹುಲ್ಲು ಹುಟ್ಟಿ, ಮನೆಯೊಳಗೆ ರಜ ತುಂಬಿ ಮನೆಯೊಳಗೆ ಮನೆಯೊಡೆಯನಿಲ್ಲ.
ತನುವಿನಲಿ ಹುಸಿ ತುಂಬಿ, ಮನದಲ್ಲಿ ವಿಷಯ ತುಂಬಿ ಮನೆಯೊಳಗೆ ಮನೆಯೊಡೆಯನಿಲ್ಲ.
ಕೂಡಲಸಂಗಮದೇವ.


82) ನೀ ಹುಟ್ಟಿಸಿದಲ್ಲಿ ಹುಟ್ಟಿ, ನೀ ಕೊಂದಲ್ಲಿ ಸಾಯದೆ ಎನ್ನ ವಶವೇ ಅಯ್ಯ.
ನೀನಿರಿಸಿದಲ್ಲಿ ಇರದೆ ಎನ್ನ ವಶವೇ ಅಯ್ಯ.
ಅಕಟಕಟಾ ಎನ್ನವನೆನ್ನವನೆನ್ನಯ್ಯ ಕೂಡಲಸಂಗಮದೇವಯ್ಯ.

83) ನಾದಪ್ರಿಯ ಶಿವನೆಂಬರು, ನಾದಪ್ರಿಯ ಶಿವನಲ್ಲಯ್ಯಾ.
ವೇದಪ್ರಿಯ ಶಿವನೆಂಬರು, ವೇದಪ್ರಿಯ ಶಿವನಲ್ಲಯ್ಯಾ.
ನಾದವ ನುಡಿಸಿದ ರಾವಳಂಗೆ ಅರೆ ಆಯುಷ್ಯವಾುತ್ತು.
ವೇದವನೋದಿದ ಬ್ರಹ್ಮನ ಶಿರ ಹೋಯಿತ್ತು.
ನಾದಪ್ರಿಯನೂ ಅಲ್ಲ, ವೇದಪ್ರಿಯನೂ ಅಲ್ಲ,
ಭಕ್ತಿಪ್ರಿಯ ನಮ್ಮ ಕೂಡಲಸಂಗಮದೇವ.

84) ಕಲ್ಲ ನಾಗರ ಕಂಡಡೆ ಹಾಲನೆರೆಯೆಂಬರು
ದಿಟದ ನಾಗರ ಕಂಡಡೆ ಕೊಲ್ಲೆಂಬರಯ್ಯಾ
ಉಂಬ ಜಂಗಮ ಬಂದಡೆ ನಡೆಯೆಂಬರು,
ಉಣ್ಣದ ಲಿಂಗಕ್ಕೆ ಬೋನವ ಹಿಡಿಯೆಂಬರಯ್ಯಾ.
ನಮ್ಮ ಕೂಡಲಸಂಗನ ಶರಣರ ಕಂಡು ಉದಾಸೀನವ ಮಾಡಿದಡೆ,
ಕಲ್ಲ ತಾಗಿದ ಮಿಟ್ಟೆಯಂತಪ್ಪರಯ್ಯಾ.

85) ತನುವ ಕೊಟ್ಟು ಗುರುವನೊಲಿಸಬೇಕು,
ಮನವ ಕೊಟ್ಟು ಲಿಂಗವನೊಲಿಸಬೇಕು,
ಧನವ ಕೊಟ್ಟು ಜಂಗಮವನೊಲಿಸಬೇಕು.
ಈ ತ್ರಿವಿಧವ ಹೊರಗು ಮಾಡಿ,
ಹರೆಯ ಹೊುಸಿ, ಕುರುಹ ಪೂಜಿಸುವ ಗೊರವರ ಮೆಚ್ಚ ಕೂಡಲಸಂಗಮದೇವ.


86) ಮಾಡಿ ಮಾಡಿ ಕೆಟ್ಟರು ಮನವಿಲ್ಲದೆ,
ನೀಡಿ ನೀಡಿ ಕೆಟ್ಟರು ನಿಜವಿಲ್ಲದೆ.
ಮಾಡುವ ನೀಡುವ ನಿಜಗುಣವುಳ್ಳಡೆ
ಕೂಡಿಕೊಂಬ ನಮ್ಮ ಕೂಡಲಸಂಗಮದೇವ.

87) ಮಾಡಿದೆನೆಂಬುದು ಮನದಲ್ಲಿ ಹೊಳೆದಡೆ,
ಏಡಿಸಿ ಕಾಡಿತ್ತು ಶಿವನ ಡಂಗುರ,
ಮಾಡಿದೆನೆನ್ನದಿರಾ ಲಿಂಗಕ್ಕೆ, ಮಾಡಿದೆನೆನ್ನದಿರಾ ಜಂಗಮಕ್ಕೆ,
ಮಾಡಿದೆನೆಂಬುದು ಮನದಲಿಲದಿದ್ದಡೆ,
ಬೇಡಿತ್ತನೀವನು ಕೂಡಲಸಂಗಮದೇವ.

88) ಬೆಳೆಯ ಭೂಮಿಯಲೊಂದು ಪ್ರಳಯದ ಕಸ ಹುಟ್ಟಿ,
ತಿಳಿಯಲೀಯದು; ಎಚ್ಚರಲೀಯದು.
ಎನ್ನವಗುಣವೆಂಬ ಕಸವ ಕಿತ್ತು ಸಲಹಯ್ಯ ಲಿಂಗತಂದೆ.
ಸುಳಿದೆಗೆದು ಬೆಳೆವೆನು ಕೂಡಲಸಂಗಮದೇವ.

89) ಹಬ್ಬಕ್ಕೆ ತಂದ ಹರಕೆಯ ಕುರಿ
ತೋರಣಕ್ಕೆ ತಂದ ತಳಿರ ಮೇಯಿತ್ತು.
ಕೊಂದಹರೆಂಬುದನರಿಯದೆ ಬೆಂದೊಡಲ ಹೊರೆಯ ಹೋಯಿತ್ತು.
ಅದಂದೆ ಹುಟ್ಟಿತು, ಅದಂದೆ ಹೊಂದಿತ್ತು.
ಕೊಂದವರುಳಿದರೆ ಕೂಡಲಸಂಗಮದೇವ

90) ಗಂಡ ಶಿವಲಿಂಗದೇವರ ಭಕ್ತ,
ಹೆಂಡತಿ ಮಾರಿಮಸಣಿಯ ಭಕ್ತೆ;
ಗಂಡ ಕೊಂಬುದು ಪಾದೋದಕಪ್ರಸಾದ,
ಹೆಂಡತಿ ಕೊಂಬುದು ಸುರೆಮಾಂಸ.
ಭಾಂಡ-ಭಾಜನ ಶುದ್ಧವಿಲ್ಲದವರ ಭಕ್ತಿ
ಹೆಂಡದ ಮಡಕೆಯ ಹೊರಗೆ ತೊಳೆದಂತೆ
ಕೂಡಲಸಂಗಮದೇವ.

ಜಗಜ್ಯೋತಿ ಬಸವೇಶ್ವರರು : ಪರಿಚಯ ಹಾಗೂ ಬಸವಣ್ಣನವರ 100 ವಚನಗಳ ಸಂಗ್ರಹ (Collection of The Top-100+ Basavanna Vachana in Kannada)


91) ನೀನೊಲಿದರೆ ಕೊರಡು ಕೊನರುವುದಯ್ಯ.
ನೀನೊಲಿದರೆ ಬರಡು ಹಯನಹುದಯ್ಯ.
ನೀನೊಲಿದರೆ ವಿಷವಮೃತವಹುದಯ್ಯ.
ನೀನೊಲಿದರೆ ಸಕಲ ಪಡಿಪದಾರ್ಥ ಇದಿರಲಿಪ್ಪವು
ಕೂಡಲಸಂಗಮದೇವ.

92) ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ,
ಮುನಿಯಬೇಡ, ಅನ್ಯರಿಗೆ ಅಸಹ್ಯಬಡಬೇಡ,
ತನ್ನ ಬಣ್ಣಿಸಬೇಡ, ಇದಿರ ಹಳಿಯಲು ಬೇಡ.
ಇದೇ ಅಂತರಂಗಶುದ್ಧಿ, ಇದೇ ಬಹಿರಂಗಶುದ್ಧಿ
ಇದೇ ನಮ್ಮ ಕೂಡಲಸಂಗಮದೇವರನೊಲಿಸುವ ಪರಿ.

93) ಕಂಡ ಭಕ್ತರಿಗೆ ಕೈಮುಗಿಯುವಾತನೆ ಭಕ್ತ,
ಮೃದುವಚನವೆ ಸಕಲ ಜಪಂಗಳಯ್ಯಾ,
ಮೃದುವಚನವೆ ಸಕಲ ತಪಂಗಳಯ್ಯಾ,
ಸದುವಿನಯವೆ ಸದಾಶಿವನ ಒಲುಮೆಯಯ್ಯಾ.
ಕೂಡಲಸಂಗಯ್ಯನಂತಲ್ಲದೊಲ್ಲನಯ್ಯಾ.

94) ದೇವಲೋಕ ಮತ್ರ್ಯಲೋಕವೆಂಬುದು ಬೇರಿಲ್ಲ ಕಾಣಿರೋ !
ಸತ್ಯವ ನುಡಿವುದೇ ದೇವಲೋಕ, ಮಿಥ್ಯವ ನುಡಿವುದೇ ಮತ್ರ್ಯಲೋಕ.
ಆಚಾರವೆ ಸ್ವರ್ಗ, ಅನಾಚಾರವೆ ನರಕ. ಕೂಡಲಸಂಗಮದೇವಾ, ನೀವೆ ಪ್ರಮಾಣು.


95) ದಯವಿಲ್ಲದ ಧರ್ಮವದೇವುದಯ್ಯಾ
ದಯವೇ ಬೇಕು ಸರ್ವಪ್ರಾಣಿಗಳೆಲ್ಲರಲ್ಲಿ.
ದಯವೇ ಧರ್ಮದ ಮೂಲವಯ್ಯಾ,
ಕೂಡಲಸಂಗಯ್ಯನಂತಲ್ಲದೊಲ್ಲನಯ್ಯಾ.



96) ತನಗೆ ಮುನಿವರಿಗೆ ತಾ ಮುನಿಯಲೇಕಯ್ಯಾ
ತನಗಾದ ಆಗೇನು ಅವರಿಗಾದ ಚೇಗೆಯೇನು
ತನುವಿನ ಕೋಪ ತನ್ನ ಹಿರಿಯತನದ ಕೇಡು.
ಮನದ ಕೋಪ ತನ್ನ ಅರಿವಿನ ಕೇಡು.
ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೆ
ನೆರೆಮನೆಯ ಸುಡದು ಕೂಡಲಸಂಗಮದೇವಾ.

97) ಧೃತಿಗೆಟ್ಟು ಅನ್ಯರ ಬೇಡದಂತೆ,
ಮತಿಗೆಟ್ಟು ಪರರುವ ಹೊಗಳದಂತೆ,
ಪರಸತಿಯರ ರತಿಗೆ ಮನ ಹಾರದಂತೆ,
ಶಿವಪಥವೊಲ್ಲದವರೊಡನಾಡದಂತೆ,
ಅನ್ಯಜಾತಿಯ ಸಂಗವ ಮಾಡದಂತೆ,
ಎನ್ನ ಪ್ರತಿಪಾಲಿಸು, ಕೂಡಲಸಂಗಮದೇವಾ.

98) ಕಾಮವ ತೊರೆದಾತ, ಹೇಮವ ಜರೆದಾತ,
ಭಾನುವಿನ ಉದಯಕ್ಕೆ ಒಳಗಾಗದ ಶರಣನು.
ಆಗಳೂ ನಿಮ್ಮ ಮಾಣದೆ ನೆನೆವರ ಮನೆಯಲು ಶ್ವಾನನಾಗಿರಿಸು,
ಮಹಾದಾನಿ ಕೂಡಲಸಂಗಮದೇವಾ.

99) ಚಕೋರಂಗೆ ಚಂದ್ರಮನ ಬೆಳಗಿನ ಚಿಂತೆ,
ಅಂಬುಜಕೆ ಭಾನುವಿನ ಉದಯದ ಚಿಂತೆ,
ಭ್ರಮರಂಗೆ ಪರಿಮಳದ ಬಂಡುಂಬ ಚಿಂತೆ,
ಎನಗೆ ನಮ್ಮ ಕೂಡಲಸಂಗನ ಶರಣರ ನೆನೆವುದೆ ಚಿಂತೆ.

100) ಭಕ್ತಿಯೆಂಬ ಪೃಥ್ವಿಯ ಮೇಲೆ, ಗುರುವೆಂಬಬೀಜವಂಕುರಿಸಿ,
ಲಿಂಗವೆಂಬ ಎಲೆಯಾುತ್ತು.
ಲಿಂಗವೆಂಬ ಎಲೆಯ ಮೇಲೆ
ವಿಚಾರವೆಂಬ ಹೂವಾುತ್ತು,
ಆಚಾರವೆಂಬ ಕಾಯಾುತ್ತು.
ನಿಷ್ಪತ್ತಿಯೆಂಬ ಹಣ್ಣು ತೊಟ್ಟು ಬಿಟ್ಟು ಕಳಚಿ ಬೀಳುವಲ್ಲಿ
ಕೂಡಲಸಂಗಮದೇವ ತನಗೆ ಬೇಕೆಂದು ಎತ್ತಿಕೊಂಡ.


ಜಗಜ್ಯೋತಿ ಬಸವೇಶ್ವರರು : ಪರಿಚಯ ಹಾಗೂ ಬಸವಣ್ಣನವರ 100 ವಚನಗಳ ಸಂಗ್ರಹ (Collection of The Top-100+ Basavanna Vachana in Kannada)


101) ನೀರ ಕಂಡಲ್ಲಿ ಮುಳುಗುವರಯ್ಯಾ,
ಮರನ ಕಂಡಲ್ಲಿ ಸುತ್ತುವರಯ್ಯಾ.
ಬತ್ತುವ ಜಲವ, ಒಣಗುವ ಮರನ
ಮಚ್ಚಿದವರು ನಿಮ್ಮನೆತ್ತ ಬಲ್ಲರು
ಕೂಡಲಸಂಗಮದೇವಾ.

102) ನೀರಿಂಗೆ ನೈದಿಲೇ ಶೃಂಗಾರ,
ಊರಿಂಗೆ ಆರವೆಯೇ ಶೃಂಗಾರ,
ಸಮುದ್ರಕ್ಕೆ ತೆರೆಯೇ ಶೃಂಗಾರ
ನಾರಿಗೆ ಗುಣವೇ ಶೃಂಗಾರ
ಗಗನಕ್ಕೆ ಚಂದ್ರಮನೇ ಶೃಂಗಾರ
ನಮ್ಮ ಕೂಡಲಸಂಗನ ಶರಣರಿಗೆ ನೊಸಲ ವಿಭೂತಿಯೇ ಶೃಂಗಾರ.

103) ಕರಿಯಂಜುವುದು ಅಂಕುಶಕ್ಕಯ್ಯ.
ಗಿರಿಯಂಜುವುದು ಕುಲಿಶಕ್ಕಯ್ಯ.
ತಮಂಧವಂಜುವುದು ಜ್ಯೋತಿಗಯ್ಯ.
ಕಾನನವಂಜುವುದು ಬೇಗೆಗಯ್ಯ.
ಪಂಚಮಹಾಪಾತಕವಂಜುವುದು
ನಮ್ಮ ಕೂಡಲಸಂಗನ ನಾಮಕ್ಕಯ್ಯ.


104) ನರವಿಂಧ್ಯದೊಳಗೆನ್ನ ಹುಲುಗಿಳಿಯ ಮಾಡಿ
ಸಲಹುತ್ತ, ‘ಶಿವಶಿವಾ’ ಎಂದೋದಿಸಯ್ಯ.
ಭಕ್ತಿ ಎಂಬ ಪಂಜರದೊಳಗಿಕ್ಕಿ ಸಲಹು ಕೂಡಲಸಂಗಮದೇವ.

105) ಭಕ್ತರ ಕಂಡರೆ ಬೋಳಪ್ಪಿರಯ್ಯ;
ಸವಣರ ಕಂಡರೆ ಬತ್ತಲೆಯಪ್ಪಿರಯ್ಯ
ಹಾರುವರ ಕಂಡರೆ ಹರಿನಾಮವೆಂಬಿರಯ್ಯ;
ಅವರವರ ಕಂಡರೆ ಅವರವರಂತೆ
ಸೂಳೆಗೆ ಹುಟ್ಟಿದವರ ತೋರದಿರಯ್ಯ.
ಕೂಡಲಸಂಗಯ್ಯನ ಪೂಜಿಸಿ ಅನ್ಯದೈವಂಗಳಿಗೆರಗಿ
ಭಕ್ತರೆನಿಸಿಕೊಂಬ ಅಜ್ಞಾನಿಗಳ ನಾನೇನೆಂಬೆನಯ್ಯ.

106) ಹಾವಿನ ಬಾಯಿ ಕಪ್ಪೆ ಹಸಿದು
ತಾ ಹಾರುವ ನೊಣಕಾಸೆ ಮಾಡುವಂತೆ,
ಶೂಲವನೇರುವ ಕಳ್ಳ ಹಾಲು ತುಪ್ಪವ ಕುಡಿದು
ಮೇಲಿನ್ನೇಸು ಕಾಲ ಬದುಕುವನೋ.
ಕೆಡುವೊಡಲ ನೆಚ್ಚಿ, ಕಡುಹುಸಿಯನೆ ಹುಸಿದು
ಒಡಲ ಹೊರೆವವರ ಮೆಚ್ಚ ನಮ್ಮ ಕೂಡಲಸಂಗಮದೇವ.







Post a Comment

0 Comments
* Please Don't Spam Here. All the Comments are Reviewed by Admin.

Buy Products

Important PDF Notes

Top Post Ad

Below Post Ad

Ads Area